ವಿನಯ್ ಕುಲಕರ್ಣಿ ಅರ್ಜಿ ಮತ್ತೆ ವಜಾ; ಧಾರವಾಡಕ್ಕಿಲ್ಲ ಪ್ರವೇಶ

Date:

ಧಾರವಾಡ ಪ್ರವೆಶಕ್ಕೆ ಅನುಮತಿ ಕೋರಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

- Advertisement -

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ಅವರಿಗೆ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ನಿರ್ಬಂಧ ವಿಧಿಸಿದೆ. ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆಯಲಿದ್ದು, ಮತದಾನ ಮಾಡಲು ಧಾರವಾಡಕ್ಕೆ ಹೋಗಲು ಅನುಮತಿ ನೀಡಬೇಕೆಂದು ಶಾಸಕ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಸಿಬಿಐ ಎಸ್​ಪಿಪಿ ಗಂಗಾಧರ ಶೆಟ್ಟಿ, “ಯೋಗೇಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಯ ತಾಯಿ ಪಾಲಿಕೆ ಸದಸ್ಯರಾಗಿದ್ದಾರೆ. ಅಲ್ಲದೆ, ಆರೋಪಿ ವಿನಯ್ ಕುಲಕರ್ಣಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಪ್ರಭಾವ ಮತ್ತಷ್ಟು ಹೆಚ್ಚಾಗಿದೆ. ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅವರು ಧಾರವಾಡ ಪ್ರವೇಶಿಸಲು ಅನುಮತಿ ನೀಡಬಾರದು” ಎಂದು ವಾದ ಮಂಡಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅರ್ಜಿಯನ್ನು ವಜಾಗೊಳಿಸಿದ್ದು, ಅನುಮತಿ ನೀಡಲು ನಿರಾಕರಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಪ್ರಚಾರಕ್ಕಾಗಿ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ಕೋರಿ ಈ ಹಿಂದೆಯೂ ಅರ್ಜಿ ಸಲ್ಲಿಸಿದ್ದರು. ಆಗಲೂ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು. ವಿನಯ್ ಪರವಾಗಿ ಅವರ ಪತ್ನಿ ಮತ್ತು ಕಾರ್ಯಕರ್ತರು ಪ್ರಚಾರ ನಡೆಸಿದ್ದರು. ವಿನಯ್ ಕ್ಷೇತ್ರಕ್ಕೆ ಪ್ರವೇಶಿಸದೆಯೇ ಗೆಲುವು ಸಾಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...