ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ಸೇರಿದಂತೆ ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ನಡೆದ ಪ್ರತಿಭಟನೆ ವೇಳೆ ಲೇಹ್‌ನಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆ ಪರಿಸರವಾದಿ, ಲಡಾಖ್ ಹೋರಾಟ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ.
ಲಡಾಖ್‌ನ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ರಕ್ಷಣೆಗಾಗಿ ಲಡಾಖ್ ಅನ್ನು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು, ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ನೀಡಬೇಕು, ಸಾರ್ವಜನಿಕ ಸೇವಾ ಆಯೋಗ(ಪಿಎಸ್‌ಎ) ರಚಿಸಬೇಕು, ಲೇಹ್ ಮತ್ತು ಕಾರ್ಗಿಲ್‌ಗೆ ತಲಾ ಒಂದು ಲೋಕಸಭೆ ಸ್ಥಾನ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು 2019ರ ನಂತರದಿಂದ ಲಡಾಖ್‌ನಲ್ಲಿ ದೀರ್ಘ ಹೋರಾಟ ನಡೆಯುತ್ತಿದೆ.
ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಬಂಧನದ ವಿರುದ್ದ ಪಿಐಎಲ್
ಸೋನಮ್ ವಾಂಗ್‌ಚುಕ್ ಅವರು ಸೆಪ್ಟೆಂಬರ್ 10ರಿಂದ ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು. ಈ ಪ್ರತಿಭಟನಾ ಸ್ಥಳದ ಹೊರಭಾಗದಲ್ಲಿ ಬುಧವಾರ(ಸೆ.24) ಹಿಂಸಾಚಾರ ನಡೆದಿದ್ದು, ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಿಜೆಪಿ ಕಚೇರಿಯನ್ನೂ ಧ್ವಂಸ ಮಾಡಲಾಗಿದೆ. ಈ ಹಿಂಸೆಗೆ ಪ್ರಚೋದನೆ ನೀಡಿದ ಆರೋಪವನ್ನು ಶಾಂತವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ಅವರ ಮೇಲೆ ಕೇಂದ್ರ ಸರ್ಕಾರ ಹೊರಿಸಿದೆ.
