ವೈರಲ್ ಆದ ಆಡಿಯೋ ನಕಲಿ – ‘ಎಐ’ ಸೃಷ್ಟಿತ; ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರ: ಝಮೀರ್ ಅಹ್ಮದ್

Date:

“ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನನ್ನ ಧ್ವನಿಯ ಆಡಿಯೋ ಸಂಪೂರ್ಣ ನಕಲಿ. ಇದನ್ನು ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ, ಇದರ ಹಿಂದೆ ರಾಜಕೀಯ ಷಡ್ಯಂತ್ರವಿದೆ,” ಎಂದು ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಇದೊಂದು ವ್ಯವಸ್ಥಿತ ರಾಜಕೀಯ ಷಡ್ಯಂತ್ರ. ನನ್ನ ತೇಜೋವಧೆ ಮಾಡಲು ನಕಲಿ ಆಡಿಯೋ ಸೃಷ್ಟಿಸಿ ವೈರಲ್ ಮಾಡಲಾಗಿದೆ. ಆಡಿಯೋ ಹಿಂದಿರುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಗೆ ದೂರು ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವೈರಲ್ ಆಡಿಯೋದಲ್ಲಿರುವ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿರುವ ಝಮೀರ್, “ಆಡಿಯೋ ಕುರಿತು ಸರ್ಕಾರ ಯಾವುದೇ ರೀತಿಯ ತನಿಖೆ ನಡೆಸಿದರೂ ನಾನು ಎದುರಿಸಲು ಸಿದ್ಧನಿದ್ದೇನೆ. ನಾನು ಆ ರೀತಿಯ ಯಾವುದೇ ಮಾತುಗಳನ್ನಾಡಿಲ್ಲ. ರಾಜಕೀಯ ಲಾಭಕ್ಕಾಗಿ ಮತ್ತು ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಇಂತಹ ಕೃತ್ಯ ಎಸಗಲಾಗಿದೆ. ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಇಂತಹ ಸುಳ್ಳು ಸುದ್ದಿಗಳನ್ನು ನಂಬಬಾರದು,” ಎಂದು ಮನವಿ ಮಾಡಿದ್ದಾರೆ.

ಈ ಲೇಖನ ಓದಿದ್ದೀರಾ?: ನೀಟ್‌ ಹಗರಣ | ಪದೇ-ಪದೇ ಎಡವುತ್ತಿರುವ ಎನ್‌ಟಿಎ ಇನ್ನಾದರೂ ಎಚ್ಚೆತ್ತುಕೊಳ್ಳುವುದೇ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯಾಗಿದ್ದು, ಬುಧವಾರವಷ್ಟೇ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆರಂಭಿಕ ಹಂತದಲ್ಲಿ ಹತ್ತು ನಾಯಕರು ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಆ ಪಟ್ಟಿಯಲ್ಲಿ, ಝಮೀರ್ ಅಹ್ಮದ್ ಖಾನ್ ಅವರ ಹೆಸರೂ ಮುಂಚೂಣಿಯಲ್ಲಿದೆ. ರಾಜ್ಯ ರಾಜಕಾರಣದಲ್ಲಿ ಇಂತಹ ಮಹತ್ವದ ಸಾಂಘಿಕ ಬದಲಾವಣೆಗಳು ನಡೆಯುತ್ತಿರುವ ಸಮಯದಲ್ಲೇ ಈ ಆಡಿಯೋ ಹೊರಬಂದಿದೆ. ಇದರಿಂದ, ಝಮೀರ್ ಅವರನ್ನು ಸಂಪುಟದಿಂದ ಹೊರಗಿಡುವ ಹುನ್ನಾರವಿದೆ ಎಂಬ ಆರೋಪಗಳೂ ಇವೆ.

ವೈರಲ್ ಆದ ಆಡಿಯೋದಲ್ಲೇನಿದೆ?

ದಾವಣಗೆರೆಯ ಕಾಂಗ್ರೆಸ್ ಮುಖಂಡರೊಬ್ಬರ ಜೊತೆ ಝಮೀರ್ ಅಹ್ಮದ್ ಖಾನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಆಡಿಯೋದಲ್ಲಿ, ಉಪಚುನಾವಣೆ ವೇಳೆ, ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಎದ್ದಿದ್ದ ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಾತನಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...