ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Date:

Advertisements

ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. “ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ವಾಗಬೇಕು” ಎಂದರು.

“ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ. ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು” ಎಂದರು.

Advertisements

“ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರ ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ ಸಮಾಜದಲ್ಲಿ ಹುಟ್ಟಿದವರು. ಅವರು ಬೆಳೆದ ಎತ್ತರ ಜನರಿಗೆ ತಿಳಿಯಬಾರದೆಂದು ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡಿದ್ದರೂ ಮಾಡಿರಬಹುದು. ಅಮರ ಶಿಲ್ಪಿ ಜಕಣಾಚಾರಿ ಇತಿಹಾಸ ನಮ್ಮ ಮುಂದಿದೆ” ಎಂದು ಸಿದ್ದರಾಮಯ್ಯ ಹೇಳಿದರು.

ಜಾತ್ಯಾತೀತ ಸಮಸಮಾಜ ನಿರ್ಮಾಣ

“ನಮ್ಮ ಸಂವಿಧಾನ ಜಾತಿ ರಹಿತ, ವರ್ಗರಹಿತ, ಜಾತ್ಯಾತೀತ ಸಮಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದೆ. ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಶತಶತಮಾನಗಳಿಂದ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಸಮಾನತೆಗೆ ಬಲಿಯಾಗಿರುವ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಸೇರುವಂತಾಗಬೇಕು. ಎಲ್ಲರಿಗೂ ಅವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯ” ಎಂದರು.

“ಚಲನಶೀಲತೆ ಇಲ್ಲದ ಸಮಾಜದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸಂವಿಧಾನದ ಪೀಠಿಕೆವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆಯಬೇಕು. ಸಂವಿಧಾನದ ವಿರೋಧಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಸಂವಿಧಾನದ ಆಶಯಗಳನ್ನು ಈಡೇರಿಸಬೇಕು. ಇದಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು” ಎಂದರು.

ಇದೇ ಸಂದರ್ಭದಲ್ಲಿ ನಾಲ್ಕು ಶಿಲ್ಪಿಗಳಿಗೆ ಜಕಣಾಚಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹಾಸನದ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಡಾ. ಎನ್. ಮಂಜುಳಾ, ಡಾ. ಧರಣಿದೇವಿ ಮಾಲಗತ್ತಿ ಸೇರಿ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X