ಕಣದಿಂದ ಹಿಂದೆ ಸರಿದ ಇಂದೋರ್‌ ಕಾಂಗ್ರೆಸ್ ಅಭ್ಯರ್ಥಿ; ನೋಟಾದತ್ತ ಜನರ ಚಿತ್ತ!

Date:

ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಜಿ ಲೋಕಸಭಾ ಸ್ಪೀಕರ್ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸುಮಿತ್ರಾ ಮಹಾಜನ್ ಅಚ್ಚರಿ ವ್ಯಕ್ತಪಡಿಸಿದ್ದು, “ನನಗೆ ಇಂದೋರ್‌ನ ಹಲವಾರು ಜನರು ಕರೆ ಮಾಡಿ ನೋಟಾಕ್ಕೆ ಮತ ಹಾಕುವುದಾಗಿ ತಿಳಿಸಿದ್ದಾರೆ” ಎಂದಿದ್ದಾರೆ.

- Advertisement -

1989 ಮತ್ತು 2014 ರ ನಡುವೆ ಸತತ ಎಂಟು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಇಂದೋರ್‌ನಲ್ಲಿ ಗೆಲುವು ಸಾಧಿಸಿರುವ 81 ವರ್ಷದ ಸುಮಿತ್ರಾ ಮಹಾಜನ್ ಅವರಿಗೆ ಈಗ ಇಂದೋರ್‌ನ ಪ್ರಮುಖ ವ್ಯಕ್ತಿಗಳು ಕರೆ ಮಾಡಿ ಮೇ 13ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಬದಲಾಗಿ ನೋಟಾಕ್ಕೆ ಮತ ಹಾಕುವುದಾಗಿ ಹೇಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಸೂರತ್- ಇಂದೋರಿನಲ್ಲಿ ಬಿಜೆಪಿ ಸಫಲ- ಮೋದಿಯುಗದ ಆಪರೇಷನ್ ಕಮಲ!

“ಈ ಘಟನೆ ಯಾಕೆ ನಡೆದಿದೆ ಎಂದು ನನಗೆ ಈವರೆಗೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನನಗೆ ಆಶ್ಚರ್ಯವಾಗಿದೆ. ಇಂದೋರ್‌ನಲ್ಲಿ ನನ್ನ 35 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇಂತಹ ಘಟನೆ ನಡೆದಿಲ್ಲ” ಎಂದು ಮಹಾಜನ್ ಮಾಧ್ಯಮಗಳಿಗೆ ಉತ್ತರಿಸುತ್ತಾ ಹೇಳಿದ್ದಾರೆ.

ಬಿಜೆಪಿಗೆ ಪಾಠ ಕಲಿಸಲು ನೋಟಾಗೆ ಮತ ಹಾಕುವಂತೆ ಇಂದೋರ್‌ನ ಜನರಿಗೆ ಕಾಂಗ್ರೆಸ್ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಹಾಜನ್ ಅವರು, “ನನಗೆ ಇಂದೋರ್‌ನ ಪ್ರಮುಖ ನಾಗರಿಕರಿಂದ ಕರೆಗಳು ಬರುತ್ತಿದೆ. ನಡೆದಿರುವ ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

ಹಾಗೆಯೇ “ಜನರು ಬಿಜೆಪಿಗೆ ಮತ ಹಾಕುವುದಿಲ್ಲ, ಬದಲಿಗೆ ಇವಿಎಂನಲ್ಲಿ ನೋಟಾ ಆಯ್ಕೆಯನ್ನು ಒತ್ತುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯೇ ಮನಸ್ಸು ಬದಲಾಯಿಸಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರಿರುವುದು, ಬಿಜೆಪಿ ಅಭ್ಯರ್ಥಿ ಆ ರೀತಿ ಮಾಡಿರುವುದಲ್ಲ ಎಂದು ನಾನು ಜನರ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದೇನೆ” ಎಂದರು.

ಇದನ್ನು ಓದಿದ್ದೀರಾ?  ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

“ನಮ್ಮ ಅಭ್ಯರ್ಥಿ ಮತ್ತು ಸಂಸದರು ಹೆಚ್ಚಿನ ಅಂತರದಿಂದ ಗೆಲ್ಲಲು ಸಿದ್ಧವಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಬಾಮ್ ಪ್ರಬಲ ನಾಯಕರೇನಲ್ಲ. ಹಾಗಿರುವಾಗ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಹಿಂಪಡೆಸಿಕೊಳ್ಳುವ ಅಗತ್ಯ ಏನಿತ್ತು” ಎಂದು ಪ್ರಶ್ನಿಸಿದ ಮಹಾಜನ್, ನಾಮಪತ್ರ ಹಿಂಪಡೆದ ಕೆಲವೇ ಗಂಟೆಗಳಲ್ಲಿ ಬಾಮ್ ಬಿಜೆಪಿ ಸೇರಿರುವುದನ್ನು ಕೂಡಾ ಪ್ರಶ್ನಿಸಿದ್ದಾರೆ.

“ಪಕ್ಷಕ್ಕೆ ಯಾರಾದರೂ ಸೇರಲು ಬಯಸಿದರೆ ನಾವು ನಿರಾಕರಿಸಲಾಗದು. ಆದರೆ ಹೊಸ ವ್ಯಕ್ತಿಗಳಿಂದಾಗಿ ಪಕ್ಷವು ದೊಡ್ಡದಾಗಿ ಬೆಳೆಯುತ್ತಾ ಹೋದಂತೆ ಅದರ ಗುಣಮಟ್ಟ ಮತ್ತು ಸಂಘಟನೆಯ ರಚನೆ ಹಾಗೆಯೇ ಉಳಿಯುತ್ತದೆಯೇ ಎಂಬುವುದನ್ನು ನಾವು ಎಂದಿಗೂ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಬಿಜೆಪಿ ಹಿರಿಯ ನಾಯಕಿ ತನ್ನ ಪಕ್ಷಕ್ಕೆ ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಕಾರ ಆರೋಪ; ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ

ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ 20 ವರ್ಷದ ಬುಡಕಟ್ಟು (ದಲಿತ) ಮಹಿಳೆಯೊಬ್ಬರು...