ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

Date:

Advertisements

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳ ಬಗ್ಗೆ ಹೇಳಿಕೆ ನೀಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, “ನಾವು ಬಾಯಿ ಮುಚ್ಚಿಕೊಂಡೇ ಇದ್ದರೆ ನಮ್ಮ ಮತದಾನದ ಹಕ್ಕನ್ನು ಇವರು ಸಂಪೂರ್ಣವಾಗಿ ಕಸಿದುಕೊಳ್ಳುವ ದಿನ ದೂರವಿಲ್ಲ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಆಪರೇಷನ್ ಮಹದೇವಪುರ ಭಾರತೀಯ ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನವನ್ನು ಕಗ್ಗೊಲೆ ಮಾಡಿದ ದೇಶದೊಳಗಿನ ಭಯೋತ್ಪಾದಕರನ್ನು ಬಯಲಿಗೆಳೆದಿದೆ” ಎಂದು ಜರೆದಿದ್ದಾರೆ.

“ಎಲ್ಲಾ ಭಾರತೀಯರ ಪರವಾಗಿ, ಡಿಜಿಟಲ್ ಡೇಟಾ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸದ ಚುನಾವಣಾ ಆಯೋಗದ ಎಲ್ಲಾ ಮೋಸದ ತಂತ್ರಗಳನ್ನು ಮೀರಿಸಿ, ಟನ್ನುಗಟ್ಟಲೆ ಮೋಸದ ದಾಖಲೆಗಳನ್ನು ಪರಿಶೀಲಿಸಿ ಪ್ರಜಾಪ್ರಭುತ್ವದ ಅಡಿಪಾಯವಾದ ನಮ್ಮ ಮತದ ಅಧಿಕಾರವನ್ನು ನಾಶಮಾಡುವ, ಅತಿದೊಡ್ಡ ದೇಶದ್ರೋಹವನ್ನು ಸಾಬೀತುಪಡಿಸಲು ಶ್ರಮಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ವಂದನೆಗಳು. ಇದು ರಾಹುಲ್ ಗಾಂಧಿ ಅಥವಾ ವಿರೋಧ ಪಕ್ಷದ ಹೋರಾಟವಲ್ಲ. ನಮ್ಮ ಹೋರಾಟ. ನಮ್ಮ ಹಕ್ಕನ್ನು ಕಗ್ಗೊಲೆ ಮಾಡಲಾಗಿದೆ” ಎಂದು ನಟ ಕಿಶೋರ್ ಕುಮಾರ್ ತಿಳಿಸಿದ್ದಾರೆ.

Advertisements

“ಈಗಲೂ ನಾವು ಎದ್ದು ನಿಲ್ಲುವುದಿಲ್ಲವೇ? ಈಗಲೂ ಯಾವುದೇ ತನಿಖೆ ಇರುವುದಿಲ್ಲವೇ? ಇದು ಹೊಸ ಸಾಮಾನ್ಯವಾಗುತ್ತದೆಯೇ? ಉಪರಾಷ್ಟ್ರಪತಿಯ ಹುದ್ದೆಯಂತಹ ಉನ್ನತ ಹುದ್ದೆಯ ರಾಜೀನಾಮೆಯಂತೆ. ಚುನಾವಣಾ ಬಾಂಡ್‌ಗಳಂತಹ ದೊಡ್ಡ ಮತ್ತು ಅಸಾಂವಿಧಾನಿಕ ಹಗರಣದಂತೆ ? ಹಾಗಿದ್ದರೆ ನಮ್ಮ ಆರ್ಥಿಕತೆ ಸತ್ತಿದೆಯೋ ಇಲ್ಲವೋ, ಆದರೆ ನಮ್ಮ ಪ್ರಜಾಪ್ರಭುತ್ವ ಖಂಡಿತವಾಗಿಯೂ ಸತ್ತಿದೆ” ಎಂದು ಪೋಸ್ಟ್‌ನಲ್ಲಿ ಬಹುಭಾಷಾ ನಟ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಪ್ಪಳ | ರಸಗೊಬ್ಬರ ಅಭಾವ: ಎರಡನೇ ದಿನವೂ ದಿಢೀರ್ ರಸ್ತೆಗಿಳಿದು ಪ್ರತಿಭಟಿಸಿದ ರೈತರು

ನಾವು ಬಾಯಿ ಮುಚ್ಚಿಕೊಂಡೇ ಇದ್ದರೆ ನಮ್ಮ ಮತದಾನದ ಹಕ್ಕನ್ನು ಇವರು ಸಂಪೂರ್ಣವಾಗಿ ಕಸಿದುಕೊಳ್ಳುವ ದಿನ ದೂರವಿಲ್ಲ. ದೇಶದ ಜನ, ಮಾಧ್ಯಮಗಳು, ನ್ಯಾಯಾಂಗ, ಅಧಿಕಾರಶಾಹಿ ಮತ್ತು ರಾಜಕಾರಣಿಗಳು ಈ ದೇಶದ್ರೋಹದ ಭಾಗವಾಗಲು ನಿರಾಕರಿಸಿ ಈ ದೇಶದ್ರೋಹಿಗಳ ವಿರುದ್ಧ ನಿಲ್ಲಬೇಕು ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

ಧರ್ಮಸ್ಥಳ ಪ್ರಕರಣ | ಬಿಜೆಪಿಯವರು ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಕ್ಕಿಂತ ವಿತಂಡವಾದದಲ್ಲಿ ಮುಳುಗಿದ್ದೇ ಹೆಚ್ಚು!

ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ...

Download Eedina App Android / iOS

X