ಮತ ಕಳ್ಳತನ | ಮಾಜಿ ಚುನಾವಣಾ ಆಯುಕ್ತರ ಟ್ರೋಲ್ ಮೀಮ್ ವೈರಲ್

Date:

Advertisements

2024ರ ಲೋಕಸಭಾ ಚುನಾವಣೆಯಲ್ಲಿ 70-100 ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅದರಲ್ಲೂ, ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ಅದಕ್ಕೆ ಪೂರಕವಾದ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ.

ರಾಹುಲ್ ಗಾಂಧಿ ಆರೋಪದ ಬೆನ್ನಲ್ಲೇ, ಬಿಜೆಪಿಗೆ ಚುನಾವಣಾ ಆಯೋಗವು ಸಹಕಾರ ನೀಡಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಚುನಾವಣಾ ಆಯೋಗವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡುತ್ತಿದ್ದಾರೆ.

ಈ ನಡುವೆ ಮೀಮ್‌ವೊಂದು ವೈರಲ್ ಆಗಿದೆ. ಅದರಲ್ಲಿ, 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್ ಕುಮಾರ್ ಅವರನ್ನು ನೆಟ್ಟಿಗರು ಅಪಹಾಸ್ಯ ಮಾಡಿದ್ದಾರೆ.

Advertisements

ಮೀಮ್‌ನಲ್ಲಿ; ಎಡಗೈನಲ್ಲಿ ಚುನಾವಣಾ ಅಕ್ರಮದ ದಾಖಲೆಗಳನ್ನು ಹಿಡಿದಿರುವ ರಾಹುಲ್‌ ಗಾಂಧಿ, ತಮ್ಮ ಬಲಗೈನಲ್ಲಿ ರಾಜೀವ್ ಕುಮಾರ್ ಅವರ ಸೂಟ್‌ಅನ್ನು ಕಳಚುತ್ತಾರೆ. ಆಗ, ರಾಜೀವ್ ಕುಮಾರ್ ಅವರು ಬಿಜೆಪಿಯ ಚಿಹ್ನೆಗಳಿರುವ ಒಡಉಡುಪು ಧರಿಸಿರುವುದು ತೆರೆದುಕೊಳ್ಳುತ್ತದೆ.

ಈ ಮೀಮ್ ರಾಜೀವ್ ಕುಮಾರ್ ಅವರು ಹೊರಗಿನಿಂದ, ಆಡಳಿತಾತ್ಮಕವಾಗಿ ಚುನಾವಣಾ ಆಯುಕ್ತರಾಗಿದ್ದಾರೆ. ಆದರೆ, ಆಂತರಿಕವಾಗಿ ಅವರು ಬಿಜೆಪಿಗರಾಗಿದ್ದಾರೆ. ಬಿಜೆಪಿಯನ್ನು ಬೆಂಬಲಿಸುತ್ತಾರೆ. ತಮ್ಮ ಅಧಿಕಾರವನ್ನು ಬಿಜೆಪಿ ನೆರವು ನೀಡಲು ಬಳಸಿಕೊಂಡಿದ್ದಾರೆ ಎಂಬ ಅರ್ಥವನ್ನು ಸೂಚಿಸುತ್ತದೆ.

ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡಸಿರುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿಗರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಅಕ್ರಮ ಎಸಗಿದೆ. ಬಿಜೆಪಿಯ ಅಕ್ರಮಕ್ಕೆ ಚುನಾವಣಾ ಆಯೋಗ ನೆರವಾಗಿದೆ ಎಂದು ಆರೋಪಿಸಿದ್ದಾರೆ. ಮಹದೇವಪುರದಲ್ಲಿ 1,00,250 ಮತಗಳ ಕಳ್ಳತನವಾಗಿದೆ ಕಾಂಗ್ರೆಸ್‌ ಸತ್ಯಶೋಧನೆ ನಡೆಸಿರುವುದಾಗಿ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಆರೋಪವನ್ನು ಚುನಾವಣಾ ಆಯೋಗವು ಅಸಂಬದ್ಧ ಎಂದು ಬಿಜೆಪಿ ಮತ್ತು ಚುನಾವಣಾ ಆಯೋಗ ಅಲ್ಲಗಳೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X