ಬಿಹಾರ ಚುನಾವಣೆಯಲ್ಲಿ ಮತಗಳ್ಳತನ; ಚುನಾವಣಾ ಆಯುಕ್ತರು ಪ್ರಮುಖ ಅಪರಾಧಿಗಳು: ರಾಹುಲ್ ಗಾಂಧಿ

Date:

ನಿನ್ನೆಯಷ್ಟೇ ಮೊದಲ ಹಂತದ ಚುನಾವಣೆ ನಡೆದಿರುವ ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ. ಈ ಸಂಬಂಧ ಪುರಾವೆಗಳನ್ನು ಬಲಪಡಿಸುವ ವರದಿಗಳು ಬಂದಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಹಾಗೆಯೇ “ಪ್ರಜಾಪ್ರಭುತ್ವದ ಕೊಲೆಯ ಪ್ರಮುಖ ಅಪರಾಧಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು ಆಗಿದ್ದಾರೆ. ಅವರು ಸಂವಿಧಾನದ ವಿರುದ್ಧದ ಅತಿದೊಡ್ಡ ದ್ರೋಹ ಮಾಡುತ್ತಿದ್ದಾರೆ” ಎಂದಿದ್ದಾರೆ.

- Advertisement -

ಗುರುವಾರ, “ಎನ್‌ಡಿಎ ಹರಿಯಾಣದಲ್ಲಿ ಮಾಡಿದಂತೆ ಬಿಹಾರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ತಯಾರಿ ನಡೆಸುತ್ತಿದೆ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ದೂರಿದ್ದರು. ಈ ವಿಡಿಯೋ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ರಾಹುಲ್ ಗಾಂಧಿ ಬಿಹಾರದಲ್ಲಿ ಮತಗಳ್ಳತನದ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಇದನ್ನು ಓದಿದ್ದೀರಾ? ಮತಗಳ್ಳತನ | ಹರಿಯಾಣ ಮತದಾರರ ಪಟ್ಟಿಯಲ್ಲಿ 22 ಬಾರಿ ಬ್ರೆಝಿಲ್ ರೂಪದರ್ಶಿ ಫೋಟೋ ಬಳಕೆ: ರಾಹುಲ್ ಗಾಂಧಿ ಆರೋಪ

ಗುರುವಾರ ರಾತ್ರಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಇತರ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತ ಚಲಾಯಿಸಿದ ಅನೇಕ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಚಲಾಯಿಸುತ್ತಿದ್ದಾರೆ. ಮತದಾನದ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ವಹಿಸಿಕೊಂಡವರು ಜನರ ಭವಿಷ್ಯವನ್ನು ಕದಿಯುವಲ್ಲಿ ಪಾಲುದಾರರಾಗಿದ್ದಾರೆ” ಎಂದು ದೂರಿದ್ದಾರೆ.

“ಭಾರತದ ನನ್ನ ಯುವ ಮತ್ತು Gen Z ಸ್ನೇಹಿತರೇ, ನಿನ್ನೆಯಷ್ಟೇ, ಹರಿಯಾಣದಲ್ಲಿ ಹೇಗೆ ಮತ ಕಳ್ಳತನದಿಂದ ಅಧಿಕಾರ ಪಡೆಯಲಾಗಿದೆ ಮತ್ತು ಇಡೀ ರಾಜ್ಯದ ಸಾರ್ವಜನಿಕ ಅಭಿಪ್ರಾಯವನ್ನು ಕಸಿದುಕೊಳ್ಳಲಾಗಿದೆ ಎಂಬುದನ್ನು ನಾನು ಸಾಕ್ಷ್ಯಾಧಾರಗಳೊಂದಿಗೆ ಪ್ರದರ್ಶಿಸಿದೆ. ಕೆಲವು ದಿನಗಳ ಹಿಂದೆ, ನಾನು SIR ಮೂಲಕ ಮತದಾರರ ಪಟ್ಟಿಗಳ ಅಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಬಿಹಾರದಲ್ಲಿ ‘ಮತದಾರರ ಹಕ್ಕುಗಳ ಯಾತ್ರೆ’ಯನ್ನು ಸಹ ನಡೆಸಿದ್ದೆ. ಇಂದು, ಬಿಹಾರದ ಪ್ರತಿಯೊಂದು ಮೂಲೆಯಿಂದ ಬರುವ ಸುದ್ದಿಗಳು ಮತ್ತು ವೀಡಿಯೊಗಳು ಮತಗಳ್ಳತನದ ಪುರಾವೆಗಳನ್ನು ಮತ್ತಷ್ಟು ಬಲಪಡಿಸುತ್ತಿವೆ” ಎಂದು ಹೇಳಿದ್ದಾರೆ.

“ಲಕ್ಷಾಂತರ ಮತದಾರರನ್ನು ಈಗಾಗಲೇ ಪಟ್ಟಿಯಿಂದ ತೆಗೆದುಹಾಕಲಾಗಿದೆ ಮತ್ತು ಈಗ ಜನರು ಮತಗಟ್ಟೆಗಳಲ್ಲಿ ಮತ ಚಲಾಯಿಸುವುದನ್ನು ತಡೆಯಲಾಗುತ್ತಿದೆ. ಅದೇ ಸಮಯದಲ್ಲಿ, ಇತರ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಮತ ಚಲಾಯಿಸಿದ ಅನೇಕ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಚಲಾಯಿಸುತ್ತಿದ್ದಾರೆ” ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.

“ನೆನಪಿಡಿ, ಮತ ಕಳ್ಳತನದ ಮೂಲಕ ರಚನೆಯಾದ ಸರ್ಕಾರವು ಯುವಕರು, Gen Z ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಎಂದಿಗೂ ಕೆಲಸ ಮಾಡದು. ಮತ್ತು ಇದನ್ನೂ ತಿಳಿದುಕೊಂಡಿರಿ, ನಿಮ್ಮ ಪ್ರಜಾಪ್ರಭುತ್ವದ ಈ ಕೊಲೆಯ ಪ್ರಮುಖ ಅಪರಾಧಿಗಳು: ಜ್ಞಾನೇಶ್ ಕುಮಾರ್(ಮುಖ್ಯ ಚುನಾವಣಾ ಅಧಿಕಾರಿ), ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ. ಇವರು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು, ಆದರೆ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರುದ್ಧ ದೊಡ್ಡ ವಿಶ್ವಾಸಘಾತುಕತನವನ್ನು ಎಸಗುತ್ತಿದ್ದಾರೆ. ಮತದಾನದ ಹಕ್ಕನ್ನು ರಕ್ಷಿಸಬೇಕಾದವರು ನಿಮ್ಮ ಭವಿಷ್ಯವನ್ನು ಕದಿಯುವಲ್ಲಿ ಪಾಲುದಾರರಾಗಿದ್ದಾರೆ” ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬುಧವಾರ, ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ, ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯನ್ನು ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು. ಹಾಗೆಯೇ ಒಂದೇ ಭಾವಚಿತ್ರವನ್ನು ಹೊಂದಿರುವ ಪಟ್ಟಿಯಲ್ಲಿದ್ದ ಹಲವು ಮತದಾರರ ವಿವರಗಳನ್ನು ಬಹಿರಂಗಪಡಿಸಿದ್ದರು.

ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ನಡೆದರೆ, ಎರಡನೇ ಮತ್ತು ಅಂತಿಮ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. 243 ಸದಸ್ಯ ಬಲದ ವಿಧಾನಸಭೆಯ ಮತ ಎಣಿಕೆ ನವೆಂಬರ್ 14ರಂದು ನಡೆಯಲಿದೆ. ಮೊದಲ ಹಂತದಲ್ಲಿ ಶೇ.64.66ರಷ್ಟು ಮತದಾನ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...