ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಮತದಾರರ ಪಟ್ಟಿ ನಾಪತ್ತೆ

Date:

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆದಿದೆ, ಚುನಾವಣಾ ಅಕ್ರಮವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸತ್ಯಶೋಧನ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ ಮತ್ತು ಚುನಾವಣಾ ಆಯೋಗದ ಮತದಾರರ ಸೇವಾ ಪೋರ್ಟಲ್‌ನಲ್ಲಿ 2024ರ ಮತದಾರರ ಪಟ್ಟಿ ಕಾಣೆಯಾಗಿದೆ.

- Advertisement -

ಗುರುವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಪ್ರತಿಭಟನಾ ಸಮಾವೇಶ ನಡೆಸಿರುವ ರಾಹುಲ್‌ ಗಾಂಧಿ, “2024ರ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಗೆ ಸುಮಾರು 1 ಲಕ್ಷಕ್ಕಿಂತ ಹೆಚ್ಚು ಮತದಾರ ಹೆಸರನ್ನು ಅಕ್ರಮವಾಗಿ ಸೇರಿಸಲಾಗಿದೆ. ಒಂದೇ ವಿಳಾಸದಲ್ಲಿ ಹಲವಾರು ಮತದಾರರ ನೋಂದಣಿಯಾಗಿದೆ. ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ಎಸಗಲಾಗಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾತ್ರವಲ್ಲದೆ, ಕೆಲ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬೆನ್ನಲ್ಲೇ, ಹಲವಾರು ಮಾಧ್ಯಮಗಳು ಮತದಾರರ ಪಟ್ಟಿಯ ಪರಿಶೀಲನೆಗಾಗಿ 2024ರ ಮತದಾರರ ಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಚುನಾವಣಾ ಆಯೋಗದ ವೆಬ್‌ಸೈಟ್‌ಅನ್ನು ಪರಿಶೀಲಿಸಿವೆ. ಆದರೆ, ವೆಬ್‌ಸೈಟ್‌ನಲ್ಲಿ ಮತದಾರರ ಪಟ್ಟಿಯೇ ಕಾಣೆಯಾಗಿದೆ. ಅಲ್ಲಿ, ಯಾವುದೇ ಕಡತಗಳು ದೊರೆತಿಲ್ಲ.

ಈ ಲೇಖನ ಓದಿದ್ದೀರಾ?: ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಮತದಾರರ ಪಟ್ಟಿಯನ್ನು ಡೌನ್‌ಲೋಡ್‌ ಮಾಡಲು ಅಗತ್ಯ ಮಾಹಿತಿಗಳನ್ನು ತುಂಬಿದ ಬಳಿಕ, ‘ವಾರ್ನಿಂಗ್‌/ಸಕ್ಸಸ್‌’ ಎಂಬ ಸಂದೇಶ ಬರುತ್ತಿದೆ. ಆದರೆ, ಪಟ್ಟಿಗಳು ಪ್ರದರ್ಶನವಾಗಿಲ್ಲ. ಮಾತ್ರವಲ್ಲದೆ, ಡೌನ್‌ಲೋಡ್‌ ಕೂಡ ಆಗಿಲ್ಲ.

ಆಧಾಗ್ಯೂ, 2025ರ ಮತದಾರರ ಪಟ್ಟಿಗಳು ಸೇರಿದಂತೆ ಉಳಿದೆಲ್ಲ ಪಟ್ಟಿಗಳು ಡೌನ್‌ಲೋಡ್‌ ಆಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...