ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಗಂಭೀರ ವಿಷಯ, ಚರ್ಚೆಗೆ ಅವಕಾಶ ನೀಡಬೇಕು: ಪ್ರಿಯಾಂಕಾ ಗಾಂಧಿ

Date:

ಬಿಹಾರದಲ್ಲಿ ನಡೆದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯು ಗಂಭೀರ ವಿಷಯ ಎಂದು ಹೇಳಿರುವ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

ಈ ಬಗ್ಗೆ ಸಂಸತ್ ಭವನದ ಸಂಕೀರ್ಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, “ಈ ವಿಷಯವು ಮತದಾರರ ಪಟ್ಟಿಯ ಮೇಲೆ ನೇರವಾಗಿ ಪರಿಣಾಮ ಬೀರುವಾಗ ವಿರೋಧ ಪಕ್ಷಗಳು ಏಕೆ ಕಳವಳ ವ್ಯಕ್ತಪಡಿಸಬಾರದು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಭ್ರಷ್ಟಾಚಾರ ತಡೆಯುವ ಬದಲು ಯುವಕರ ಮೇಲೆ ಲಾಠಿ ಚಾರ್ಜ್‌: ಪ್ರಿಯಾಂಕಾ ಗಾಂಧಿ ಆಕ್ರೋಶ

ಇನ್ನು ವಿರೋಧ ಪಕ್ಷಗಳು ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸಿದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಕುರಿತು ಲೋಕಸಭೆಯಲ್ಲಿ ಚರ್ಚೆಗೆ ಆಗ್ರಹಿಸಿದೆ. ನಿರಂತ ಪ್ರತಿಭಟನೆ ನಡೆಸಿದ್ದು ಮಧ್ಯಾಹ್ನ ಎರಡು ಗಂಟೆವರೆಗೆ ಸಂಸತ್ತನ್ನು ಮುಂದೂಡಿಕೆ ಮಾಡಲಾಗಿದೆ.

ಈಗಾಗಲೇ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮುಗಿದಿದ್ದು, ಸುಮಾರು 64 ಲಕ್ಷ ಅಧಿಕ ಮತದಾರರ ಹೆಸರನ್ನು ಪಟ್ಟಿಯಿಂದ ‘ಡಿಲೀಟ್’ ಮಾಡಲಾಗಿದೆ. ಈ ಪೈಕಿ ಮೃತರು, ಶಾಶ್ವತವಾಗಿ ವಲಸೆ ಹೋದವರು, ಬಹು ಸ್ಥಳಗಳಲ್ಲಿ ನೋಂದಾಯಿಸಲ್ಪಟ್ಟವರು ಮತ್ತು ಪತ್ತೆಹಚ್ಚಲಾಗದವರು ಸೇರಿದ್ದಾರೆ ಎನ್ನಲಾಗಿದೆ.

“ಸುಮಾರು 22 ಲಕ್ಷ ಮತದಾರರನ್ನು ಮೃತರೆಂದು ಘೋಷಿಸಲಾಗಿದೆ. 35 ಲಕ್ಷ ಮತದಾರರು ಶಾಶ್ವತವಾಗಿ ವಲಸೆ ಹೋಗಿದ್ದರು ಅಥವಾ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಸುಮಾರು 7 ಲಕ್ಷ ಜನರು ಬಹು ಸ್ಥಳಗಳಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ” ಎಂದು ವರದಿಯಾಗಿದೆ.

ಈ ಪ್ರಕ್ರಿಯೆಯು ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ. ಈ ಪ್ರಕ್ರಿಯೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಇಂಡಿಯಾ ಒಕ್ಕೂಟ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದಿಂದಾಗಿ ಸೋಮವಾರ ಪ್ರತಿಭಟನೆ ನಡೆದಿಲ್ಲ. ಆದರೆ ವಿರೋಧ ಪಕ್ಷವು ಸಂಸತ್ತಿನ ಎರಡೂ ಸದನಗಳಲ್ಲಿ ಈ ವಿಷಯವನ್ನು ಚರ್ಚಿಸಬೇಕೆಂದು ಒತ್ತಾಯಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...