ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಇಂದು ಸಂಜೆ ಆರು ಗಂಟೆಗೆ ಕೊನೆಯಾಗಿದೆ. ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಅತೀ ಹೆಚ್ಚು ಮತದಾನವಾಗಿದೆ.
ಚನ್ನಪಟ್ಟಣದಲ್ಲಿ ಶೇ.88.80ರಷ್ಟು, ಸಂಡೂರಿನಲ್ಲಿ ಶೇ.76.24 ಹಾಗೂ ಶಿಗ್ಗಾಂವಿಯಲ್ಲಿ ಶೇ.80.48ರಷ್ಟು ಮತದಾನವಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಅಂತಿಮ ಮತದಾನ ಪ್ರಮಾಣವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟನೆಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಉಪಚುನಾವಣೆ | ಸಂಜೆ 5 ಗಂಟೆ ಹೊತ್ತಿಗೆ ಶೇ.76.09 ರಷ್ಟು ಮತದಾನ
ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್‌ನ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿ ಸಂಜೆ ಆರು ಗಂಟೆಗೆ ಮುಕ್ತಾಯವಾಗಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ನ.23ಕ್ಕೆ ನಡೆಯಲಿದೆ.
