ಲೋಕಸಭೆ ಚುನಾವಣೆ ಕೊನೆಯ ಹಂತದ (7ನೇ ಹಂತ) ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಇಂದು ಕಣದಲ್ಲಿದ್ದಾರೆ.
ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆದು ಚುನಾವಣೆಯು ಮುಕ್ತಾಯವಾಗಲಿದೆ. ಮಂಗಳವಾರ ಮತ ಎಣಿಕೆ ನಡೆಯಲಿದೆ. ಪಶ್ಚಿಮ ಬಂಗಾಳದ ಒಂಬತ್ತು, ಉತ್ತರ ಪ್ರದೇಶ 13, ಬಿಹಾರದ ಎಂಟು, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ ಮೂರು ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಏಕೈಕ ಕ್ಷೇತ್ರದಲ್ಲಿ ಇಂದು ಮತದಾನ ನಡೆಯುತ್ತಿದೆ.
ಪಂಜಾಬ್‌ನ ಎಲ್ಲಾ 13 ಸ್ಥಾನಗಳಲ್ಲಿಯೂ ಇಂದು ಚುನಾವಣೆಯಾಗಲಿದೆ. ಪಂಜಾಬ್‌ನಲ್ಲಿ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಯಲ್ಲಿ ಸ್ಪರ್ಧಿಸುತ್ತಿದೆ.
ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ | ಮತ ಎಣಿಕೆ ವೇಳೆ ಈ ಅಂಶಗಳನ್ನು ತಪ್ಪದೆ ಪರಿಶೀಲಿಸಿ
ಒಡಿಶಾದ ಉಳಿದ 42 ವಿಧಾನಸಭಾ ಸ್ಥಾನಗಳು ಮತ್ತು ಆರು ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರದ ಅದೃಷ್ಟದ ಪರೀಕ್ಷೆಯಾಗಲಿದೆ.
Jharkhand: An elderly woman shows the indelible ink mark on her finger after casting her vote at a polling booth in Dumka Parliamentary constituency. #LokSabhaElections2024 pic.twitter.com/E0hdlpRhAR
— ANI (@ANI) June 1, 2024
ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರ ವಾರಣಾಸಿಯಲ್ಲಿಯೂ ಇಂದು ಮತದಾನ ನಡೆಯಲಿದೆ. ಪಿಎಂ ಮೋದಿ 2014ರಲ್ಲಿ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಮೂರನೇ ಸ್ಥಾನ ಪಡೆದಿದ್ದ ಅಜಯ್ ರೈ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಹಮೀರ್‌ಪುರದಿಂದ ಬಿಜೆಪಿಯ ಕೇಂದ್ರ ಸಚಿವ ಅನುರಾಗ್ ಠಾಕೂರ್, ಮಹಾರಾಜ್‌ಗಂಜ್ ಅಭ್ಯರ್ಥಿ ಕಿರಿಯ ಹಣಕಾಸು ಸಚಿವ ಪಂಕಜ್ ಚೌಧರಿ, ಮಂಡಿಯಲ್ಲಿ ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿರುವ ನಟಿ, ರಾಜಕಾರಣಿ ಕಂಗನಾ ರನೌತ್, ಗೋರಖ್‌ಪುರದ ರವಿ ಕಿಶನ್ ಸ್ಪರ್ಧಿಸುತ್ತಿದ್ದಾರೆ.
ಎನ್‌ಡಿಎಯ ಆರ್‌ಎಲ್‌ಎಂ ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಕರಕಟ್ ಕ್ಷೇತ್ರದಲ್ಲಿ, ಅಪ್ನಾ ದಳದ (ಸೋನೆಲಾಲ್) ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಮಿರ್ಜಾಪುರದಲ್ಲಿ ಕಣದಲ್ಲಿದ್ದಾರೆ.
ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್
ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಪಾಟಲಿಪುತ್ರದಲ್ಲಿ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಮತ್ತು ಜಲಂಧರ್‌ನಲ್ಲಿ ಕಾಂಗ್ರೆಸ್‌ನ ಚರಣಜೀತ್ ಸಿಂಗ್ ಚನ್ನಿ ಸ್ಪರ್ಧಿಸುತ್ತಿದ್ದಾರೆ.
ಚುನಾವಣೆಯ ನಂತರ ಎಕ್ಸಿಟ್ ಪೋಲ್‌ಗಳು ನಡೆಯಲಿದ್ದು, ಅದನ್ನು ಕಾಂಗ್ರೆಸ್ ಬಹಿಷ್ಕರಿಸಿದೆ. ಬಿಜೆಪಿ ಇದು ವಿಕ್ಷಗಳ ಸೋಲಿನ ಭಯ ಎಂದು ಆಡಿಕೊಂಡಿದೆ.
ಮತ ಎಣಿಕೆಯು ಜೂನ್ 4ರಂದು ನಡೆಯಲಿದೆ. ಲೋಕಸಭಾ ಸ್ಥಾನಗಳ ಜೊತೆಗೆ, ಒಡಿಶಾ ಮತ್ತು ಆಂಧ್ರ ಪ್ರದೇಶದ ಎರಡು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ನಡೆಯಲಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ಮತಗಳ ಎಣಿಕೆ ಭಾನುವಾರ ನಡೆಯಲಿದೆ.