ಲೋಕಸಭೆ ಚುನಾವಣೆ| ಕೊನೆಯ ಹಂತದ ಮತದಾನ ಆರಂಭ, ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಪಟ್ಟಿ

Date:

ಲೋಕಸಭೆ ಚುನಾವಣೆ ಕೊನೆಯ ಹಂತದ (7ನೇ ಹಂತ) ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಇಂದು ಕಣದಲ್ಲಿದ್ದಾರೆ.

- Advertisement -

ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆದು ಚುನಾವಣೆಯು ಮುಕ್ತಾಯವಾಗಲಿದೆ. ಮಂಗಳವಾರ ಮತ ಎಣಿಕೆ ನಡೆಯಲಿದೆ. ಪಶ್ಚಿಮ ಬಂಗಾಳದ ಒಂಬತ್ತು, ಉತ್ತರ ಪ್ರದೇಶ 13, ಬಿಹಾರದ ಎಂಟು, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ ಮೂರು ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಏಕೈಕ ಕ್ಷೇತ್ರದಲ್ಲಿ ಇಂದು ಮತದಾನ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪಂಜಾಬ್‌ನ ಎಲ್ಲಾ 13 ಸ್ಥಾನಗಳಲ್ಲಿಯೂ ಇಂದು ಚುನಾವಣೆಯಾಗಲಿದೆ. ಪಂಜಾಬ್‌ನಲ್ಲಿ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಯಲ್ಲಿ ಸ್ಪರ್ಧಿಸುತ್ತಿದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ | ಮತ ಎಣಿಕೆ ವೇಳೆ ಈ ಅಂಶಗಳನ್ನು ತಪ್ಪದೆ ಪರಿಶೀಲಿಸಿ

ಒಡಿಶಾದ ಉಳಿದ 42 ವಿಧಾನಸಭಾ ಸ್ಥಾನಗಳು ಮತ್ತು ಆರು ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರದ ಅದೃಷ್ಟದ ಪರೀಕ್ಷೆಯಾಗಲಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರ ವಾರಣಾಸಿಯಲ್ಲಿಯೂ ಇಂದು ಮತದಾನ ನಡೆಯಲಿದೆ. ಪಿಎಂ ಮೋದಿ 2014ರಲ್ಲಿ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಮೂರನೇ ಸ್ಥಾನ ಪಡೆದಿದ್ದ ಅಜಯ್ ರೈ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಹಮೀರ್‌ಪುರದಿಂದ ಬಿಜೆಪಿಯ ಕೇಂದ್ರ ಸಚಿವ ಅನುರಾಗ್ ಠಾಕೂರ್, ಮಹಾರಾಜ್‌ಗಂಜ್‌ ಅಭ್ಯರ್ಥಿ ಕಿರಿಯ ಹಣಕಾಸು ಸಚಿವ ಪಂಕಜ್ ಚೌಧರಿ, ಮಂಡಿಯಲ್ಲಿ ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿರುವ ನಟಿ, ರಾಜಕಾರಣಿ ಕಂಗನಾ ರನೌತ್, ಗೋರಖ್‌ಪುರದ ರವಿ ಕಿಶನ್ ಸ್ಪರ್ಧಿಸುತ್ತಿದ್ದಾರೆ.

ಎನ್‌ಡಿಎಯ ಆರ್‌ಎಲ್‌ಎಂ ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಕರಕಟ್‌ ಕ್ಷೇತ್ರದಲ್ಲಿ, ಅಪ್ನಾ ದಳದ (ಸೋನೆಲಾಲ್) ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಮಿರ್ಜಾಪುರದಲ್ಲಿ ಕಣದಲ್ಲಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಪಾಟಲಿಪುತ್ರದಲ್ಲಿ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಮತ್ತು ಜಲಂಧರ್‌ನಲ್ಲಿ ಕಾಂಗ್ರೆಸ್‌ನ ಚರಣಜೀತ್ ಸಿಂಗ್ ಚನ್ನಿ ಸ್ಪರ್ಧಿಸುತ್ತಿದ್ದಾರೆ.

ಲೋಕಸಭೆ ಚುನಾವಣೆ

ಚುನಾವಣೆಯ ನಂತರ ಎಕ್ಸಿಟ್ ಪೋಲ್‌ಗಳು ನಡೆಯಲಿದ್ದು, ಅದನ್ನು ಕಾಂಗ್ರೆಸ್ ಬಹಿಷ್ಕರಿಸಿದೆ. ಬಿಜೆಪಿ ಇದು ವಿಕ್ಷಗಳ ಸೋಲಿನ ಭಯ ಎಂದು ಆಡಿಕೊಂಡಿದೆ.

ಮತ ಎಣಿಕೆಯು ಜೂನ್ 4ರಂದು ನಡೆಯಲಿದೆ. ಲೋಕಸಭಾ ಸ್ಥಾನಗಳ ಜೊತೆಗೆ, ಒಡಿಶಾ ಮತ್ತು ಆಂಧ್ರ ಪ್ರದೇಶದ ಎರಡು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ನಡೆಯಲಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ಮತಗಳ ಎಣಿಕೆ ಭಾನುವಾರ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...