ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ, ಮತದಾರರಿಗೆ 10 ಲಕ್ಷ ಉಡುಗೊರೆ

Date:

Advertisements

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5, ಮಂಗಳವಾರ) ಮತದಾನ ನಡೆಯಲಿದ್ದು, ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಸೋಮವಾರ ಕೊನೆಯ ದಿನ ಬಿರುಸಿನ ಪ್ರಚಾರದಲ್ಲಿ ಭಾಗಿಯಾದರು. ಈಗಾಗಲೇ 7.8 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ‘ಮೇಲ್-ಇನ್’ ಮೂಲಕ ಮತ ಚಲಾಯಿಸಿದ್ದಾರೆ ಎಂದು ಯುನಿವರ್ಸಿಟಿ ಆಫ್ ಫ್ಲೋರಿಡಾದ ಎಲೆಕ್ಷನ್ ಲ್ಯಾಬ್‌ ತಿಳಿಸಿದೆ.

ಮಂಗಳವಾರವೇ ಏಕೆ ಮತದಾನ?

Advertisements

ಅಮೆರಿಕದಲ್ಲಿ ಪ್ರತಿ 4 ವರ್ಷಗಳಿಗೊಮ್ಮೆ ಎಲ್ಲ ರಾಜ್ಯಗಳಲ್ಲಿ ಒಂದೇ ದಿನದಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆ ನವೆಂಬರ್​ನ ಮೊದಲ ಮಂಗಳವಾರದ ದಿನ ಆಯ್ಕೆ ಮಾಡಲಾಗಿದೆ. ಈ ಕಾನೂನನ್ನು 1845ರಲ್ಲಿ ಜಾರಿಗೊಳಿಸಲಾಯಿತು. 180 ವರ್ಷಗಳ ಹಿಂದೆ ಅಮೆರಿಕ ಬಹುತೇಕ ಕೃಷಿ ಪ್ರಧಾನ ರಾಷ್ಟ್ರವಾಗಿತ್ತು. ನವೆಂಬರ್ ಆರಂಭದ ದಿನಗಳಲ್ಲಿ ರೈತರಿಗೆ ಕೃಷಿ ಕೆಲಸಗಳೇ ಹೆಚ್ಚಿರುತ್ತಿದ್ದವು. ಬಹುತೇಕ ಕ್ರಿಶ್ಚಿಯನ್ನರು ಭಾನುವಾರದಂದು ಚರ್ಚ್​ಗೆ ಹೋಗುತ್ತಿದ್ದರು. ಉಳಿದ ದಿನ ಮಾರಾಟ, ಖರೀದಿ ಸೇರಿದಂತೆ ಹಲವು ಕೆಲಸಗಳಿರುತ್ತಿದ್ದವು. ಆ ಕಾರಣದಿಂದ ಮಂಗಳವಾರವನ್ನು ನಿಗದಿಪಡಿಸಲಾಗಿದೆ.

ಇಲ್ಲಿ 50 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 538 ಎಲೆಕ್ಟರ್ಸ್‌ ಚುನಾಯಿತರಾಗುತ್ತಾರೆ. ಪ್ರತಿ ರಾಜ್ಯದಿಂದ ಆಯ್ಕೆಯಾದ ಎಲೆಕ್ಟರ್ಸ್‌ ಸಂಖ್ಯೆ ಭಿನ್ನವಾಗಿರುತ್ತದೆ. ಸಾಮಾನ್ಯವಾಗಿ, ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಗಳಿಗೆ ಆಯಾ ರಾಜ್ಯದ ಅಧಿಕಾರ ಲಭಿಸುತ್ತದೆ. 54 ಸ್ಥಾನಗಳನ್ನು ಹೊಂದಿರುವ ಕ್ಯಾಲಿಫೋರ್ನಿಯಾ ಜನಸಂಖ್ಯಾ ದೃಷ್ಟಿಯಲ್ಲಿ ದೊಡ್ಡ ರಾಜ್ಯವಾಗಿದೆ. ಈ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದವರು ಸಂಪೂರ್ಣ 54 ಸ್ಥಾನಗಳಲ್ಲೂ ವಿಜಯಿಶಾಲಿಗಳಾಗಲಿದ್ದಾರೆ.

ಮತದಾರರಿಗೆ 10 ಲಕ್ಷ ಉಡುಗೊರೆ

ಅಮೆರಿಕದ ಸಂವಿಧಾನವನ್ನು ಬೆಂಬಲಿಸುವ ಆನ್‌ಲೈನ್ ಅರ್ಜಿಗೆ ಸಹಿ ಹಾಕುವವರಿಗೆ ಪ್ರತಿದಿನ ₹10 ಲಕ್ಷ ಉಡುಗೊರೆ ನೀಡುವ ಬಿಲಿಯನೇರ್ ಉದ್ಯಮಿ ಇಲಾನ್ ಮಸ್ಕ್ ಅವರ ಪ್ರಸ್ತಾವಕ್ಕೆ ಪೆನ್ಸಿಲ್ವೇನಿಯಾ ನ್ಯಾಯಾಧೀಶರು ಸಮ್ಮತಿ ಸೂಚಿಸಿದ್ದಾರೆ. ಫಿಲಡೆಲ್ಸಿಯಾ ನ್ಯಾಯಾಲಯದಲ್ಲಿ ಸೋಮವಾರ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶ ಏಂಜೆಲೊ ಫೋಗ್ಲಿಯೆಟ್ಟಾ ಅವರು ಆದೇಶ ಪ್ರಕಟಿಸಿದ್ದಾರೆ. ಮಸ್ಕ್ ಅವರ ಮನವಿಗೆ ಸ್ಪಂದಿಸಿ ಅಮೆರಿಕದ ಸಂವಿಧಾನವನ್ನು ಬೆಂಬಲಿಸುವ ಆನ್‌ಲೈನ್ ಅರ್ಜಿಗೆ ಸಹಿ ಹಾಕಿದವರು ಮತ್ತು ಉಡುಗೊರೆಗೆ ಅರ್ಹತೆ ಪಡೆದವರ ಹೆಸರುಗಳನ್ನು ಅಧ್ಯಕ್ಷೀಯ ಚುನಾವಣೆ ನಡೆಯಲಿರುವ ನ.5ರಂದು ಘೋಷಿಸಲಾಗುವುದು ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X