ವಕ್ಫ್ ವಿವಾದ | ಯತ್ನಾಳ್ ನೇತೃತ್ವದ ಬಿಜೆಪಿಯ ಬಂಡಾಯ ತಂಡದಿಂದ ಬೀದರ್ ಜಿಲ್ಲೆಗೆ ಭೇಟಿ

Date:

ಇತ್ತೀಚೆಗೆ ಬಾಗಲಕೋಟೆಯಲ್ಲಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ವಕ್ಫ್ ಬಗ್ಗೆ ಪ್ರಸ್ತಾಪಿಸಿ ಜನರ ಛೀಮಾರಿ ಎದುರಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈಗ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ಬೀದರ್ ತಲುಪಿದ್ದಾರೆ. ವಕ್ಫ್ ವಿವಾದದ ಬಗ್ಗೆ ಜನಜಾಗೃತಿ ಮೂಡಿಸಲು ಬೀದರ್ ಜಿಲ್ಲೆಗೆ ಇಂದು ಭೇಟಿ ನೀಡಲಾಗಿದೆ ಎಂದು ನಾಯಕರುಗಳು ಹೇಳಿಕೊಂಡಿದ್ದಾರೆ.

- Advertisement -

ಆದರೆ ಬಿಜೆಪಿಯ ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್ ಹೊರತುಪಡಿಸಿ ಬಿಜೆಪಿಯ ಯಾವುದೇ ಮುಖಂಡರು ಕೂಡಾ ಯತ್ನಾಳ್ ತಂಡದ ಜೊತೆ ಇಲ್ಲ. ಜಿಲ್ಲೆಯಲ್ಲಿರುವ ಬಿಜೆಪಿಯ ನಾಲ್ವರು ಶಾಸಕರುಗಳು ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಯತ್ನಾಳ್ ತಂಡದ ಬಳಿ ಕಾಣಿಸಿಕೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಬಾಗಲಕೋಟೆ | ದೇವಸ್ಥಾನದ ಕಾರ್ಯಕ್ರಮದಲ್ಲಿ ‘ವಕ್ಫ್‌’ ವಿಚಾರ: ಶಾಸಕ ಯತ್ನಾಳ್‌ಗೆ ಸಾರ್ವಜನಿಕರಿಂದ ಛೀಮಾರಿ

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಜಿಎಂ ಸಿದ್ಧೇಶ್ವರ, ಮಾಜಿ ಶಾಸಕ ಕುಮಾರ ಬಂಗಾರಪ್ಪ, ಶಾಸಕ ಬಿ ಪಿ ಹರೀಶ್, ಬಿಜೆಪಿ ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್ ತಂಡವನ್ನು ಭೇಟಿಯಾದರು.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ, “ವಕ್ಫ್ ವಿವಾದದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ನಾವು ಬೀದರ್‌ ಜಿಲ್ಲೆಯಿಂದ ಪ್ರಾರಂಭಿಸಿದ್ದೇವೆ. ವಾರ್‌ ರೂಂ ಆರಂಭಿಸಿದ ಬಳಿಕ ಹಲವು ಕರೆಗಳು ಬರುತ್ತಿವೆ. ವಕ್ಫ್ ವಿವಾದ ಗಮನಕ್ಕೆ ಬಂದ ಕೂಡಲೇ ವಿಜಯಪುರದಲ್ಲಿ ಯತ್ನಾಳ್ ಅವರು ಹೋರಾಟ ನಡೆಸಿದ್ದಾರೆ. ನಾವು ಈಗ ಮಾಡುತ್ತಿರುವ ಕೆಲಸ ಧರ್ಮದ ಕೆಲಸ” ಎಂದು ಹೇಳಿದರು.

“ಕೇಂದ್ರ ಸಂಸದೀಯ ಸಮಿತಿ ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಕಳುಹಿಸಲು ತಿಳಿಸಿದೆ. ಸಮಿತಿ ಸೂಚನೆಯಂತೆ ನಾವು ಮಾಹಿತಿ ಸಂಗ್ರಹಿಸಿ, ಜನಜಾಗೃತಿ ಮೂಡಿಸಲು ನಿರ್ಧರಿಸಿದ್ದೇವೆ. ಬೀದರ್‌ನ ಚಟನಳ್ಳಿ, ಧರ್ಮಾಪೂರ ಗ್ರಾಮದಲ್ಲಿ ರೈತರ ಆಸ್ತಿಯನ್ನು ವಕ್ಫ್ ಎಂದು ನಮೂದಿಸಲಾಗಿದೆ. ಅಲ್ಲಿಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...