ಜನರು ದಂಗೆ ಏಳುವ ಮುನ್ನವೇ ವಕ್ಫ್‌ ಮಂಡಳಿ ರದ್ದಾಗಬೇಕು: ಆರ್‌ ಅಶೋಕ್‌ ಆಗ್ರಹ

Date:

Advertisements

ಜನರು ದಂಗೆ ಏಳುವ ಮುನ್ನವೇ ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ವಕ್ಫ್‌ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್‌ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ” ಎಂದು ದೂರಿದರು.

“ಬೌರಿಂಗ್‌ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ. ವಕ್ಫ್‌ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗುತ್ತಿದೆ. ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ” ಎಂದರು.

Advertisements

“ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ. ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ ಬಳಿಕ ರೇಷನ್‌ ಕಾರ್ಡ್‌ ಜಿಹಾದ್‌ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್‌ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ. ಸರ್ಕಾರ ತಪ್ಪು ಮಾಡಿದರೆ, ಜನರು 10-15 ಸಾವಿರ ಲಂಚ ಕೊಟ್ಟು ರೇಷನ್‌ ಕಾರ್ಡ್‌ ಮಾಡಿಸಿಕೊಳ್ಳಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲ. ಅದಕ್ಕಾಗಿ ಪ್ರತಿಯೊಂದಕ್ಕೂ ಶುಲ್ಕ ಏರಿಕೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಿಎಂ ಸಿದ್ದರಾಮಯ್ಯ ತೆರಿಗೆ ವಿಧಿಸದ ವಸ್ತುಗಳೇ ಇಲ್ಲ. ಹರಿಯುವ ನದಿಗೂ ತೆರಿಗೆ ವಿಧಿಸಿದ್ದಾರೆ. ಇನ್ನು ಗಾಳಿಗೂ ತೆರಿಗೆ ವಿಧಿಸಬಹುದು. ಸರ್ಕಾರ ಪಾಪರ್‌ ಆಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಡ.‌ ಸಿಎಂ ಸಿದ್ದರಾಮಯ್ಯ ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್‌ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ” ಎಂದು ವ್ಯಂಗ್ಯವಾಡಿದರು.

ತಿದ್ದುಪಡಿ ಮಸೂದೆ ಬರಲಿದೆ

“ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್‌ಮ್ಯಾನ್‌ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿಯವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X