ವಕ್ಫ್ ವಿವಾದ ಬಿಜೆಪಿ ಸೃಷ್ಟಿ, ಯಾವುದೇ ರೈತರನ್ನು ನಾವು ಒಕ್ಕಲೆಬ್ಬಿಸುವುದಿಲ್ಲ: ಡಿ ಕೆ ಶಿವಕುಮಾರ್‌

Date:

ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿ, “ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟಿಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟಿಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಜನ ಬಹಳ ಬುದ್ಧಿವಂತರು ಅವರಿಗೆ ಜನ ತಕ್ಕ ರೀತಿ ಪಾಠ ಕಲಿಸಲಿದ್ದಾರೆ. ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ” ಎಂದರು.

“ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಜೆಸಿಪಿ ರಾಜ್ಯಕ್ಕೆ ಭೇಟಿ ನೀಡುವುದಾದರೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಡೀ ಸಮಿತಿ ತಂಡ ಭೇಟಿ ನೀಡಬೇಕು. ಕೇವಲ ಸಮಿತಿ ಅಧ್ಯಕ್ಷರು ಬಂದಿದ್ದಾರೆ ಎಂದರೆ ಅವರು ಪಕ್ಷದ ಕೆಲಸಕ್ಕಾಗಿ ಬಂದಿದ್ದಾರೆ. ಅವರು ಸಂಸದರಾದ ಬೊಮ್ಮಾಯಿ ಹಾಗೂ ಸಚಿವ ಸೋಮಣ್ಣ ಅವರ ಜತೆ ಬಂದಿದ್ದಾರೆ. ಇವರಿಬ್ಬರು ಜೆಪಿಸಿ ಸದಸ್ಯರೇ? ಭೇಟಿ ನೀಡಿರುವವರು ಕೇವಲ ಬಿಜೆಪಿ ಸದಸ್ಯರು ಮಾತ್ರ, ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ. ಅವರು ಏನಾದರೂ ರಾಜಕೀಯ ಮಾಡಲಿ. ಸತ್ಯಾಂಶವೇ ಬೇರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

ಶಿವಕುಮಾರ್ ಮುಂದೆ ಯಾಕೆ ತಗ್ಗಿಬಗ್ಗಿ ನಡೆಯಬೇಕು ಎಂಬ ಆರ್.ಅಶೋಕ್ ಅವರ ಟ್ವೀಟ್ ಬಗ್ಗೆ ಕೇಳಿದಾಗ, “ನಾನು ಅವರ ವಿಚಾರ ಮಾತನಾಡಿಲ್ಲ. ನಾನು ಜಯನಗರ ಕ್ಷೇತ್ರದ ಅನುದಾನ ವಿಚಾರವಾಗಿ ಸಂಸದ ಸೂರ್ಯ ಅವರ ಜತೆ ಚರ್ಚೆ ಮಾಡಿದ್ದೇನೆ. ಅಲ್ಲಿನ ಶಾಸಕರು ನಾನು ಸಚಿವನಾದ ನಂತರ ಬೆಂಗಳೂರು ಅಧೋಗತಿಯಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ಎಲ್ಲಿ ಅಧೋಗತಿಯಾಗಿದೆ? ಇದೇ ಅಶೋಕ್ ಅವರು ಸಂವಿಧಾನಿಕ ಸಂಸ್ಥೆ ಲೋಕಾಯುಕ್ತ ಬಗ್ಗೆ ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿ ಅಪಮಾನ ಮಾಡಿದ್ದಾರೆ. ಎಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿದೆ? ವಿರೋಧ ಪಕ್ಷದ ನಾಯಕರಾಗಿ ಅವರು ನೀಡಿರುವ ಹೇಳಿಕೆ ಮ್ಯಾಚ್ ಫಿಕ್ಸಿಂಗಾ?” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...