ವಕ್ಫ್‌ ಆಸ್ತಿ | ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್ ಪಡೆಯಲು ಸಿಎಂ ಸೂಚನೆ

Date:

ವಕ್ಫ್‌ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್‌ ಪಡೆಯಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

- Advertisement -

ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದ್ದಾರೆ. “ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮ ಸರಿಯಲ್ಲ. ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನ ನಡೆಯುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಇಂತಹ ವಿಚಾರಗಳಲ್ಲಿ ಅಧಿಕಾರಿಗಳು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ಜೊತೆಗೆ, ಯಾವುದೇ ಮಾಹಿತಿ ಕೊಡದೆ ಪಹಣಿಯಲ್ಲಿ ಎಂಥದ್ದೇ ತಿದ್ದುಪಡಿ ಮಾಡಿದ್ದರೂ, ಅದರನ್ನು ತಕ್ಷಣ ರದ್ದು ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ವರದಿ ಓದಿದ್ದೀರಾ?: ‘ವಕ್ಫ್‌ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್‌ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ

ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶ಼ಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...