ವಕ್ಫ್ ಆಸ್ತಿ ವಿಚಾರವಾಗಿ ವಿಜಯಪುರ ಜಿಲ್ಲೆಯ ಹಲವು ರೈತರಿಗೆ ನೋಟಿಸ್ ನೀಡಲಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯುತ್ತಿದೆ. ಇದೀಗ, ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ ವಕ್ಸ್‌ನಿಂದ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ದಾಖಲೆ ಬಿಡುಗಡೆ ಮಾಡಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, “ಬಿಜೆಪಿಗರ ನಕಲಿ ಹಿಂದೂ ಪ್ರೇಮದ ಮೊಸಳೆ ಕಣ್ಣೀರು ಬಟಾ ಬಯಲಾಗಿದೆ. 2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟಿಸ್‌ಗಳಿವು” ಎಂದು ದಾಖಲೆಗಳನ್ನು ಹಂಚಿಕೊಂಡಿದ್ದಾರೆ.
“ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ? ರಾಜ್ಯದ ಅಭಿವೃದ್ಧಿ ಬಿಟ್ಟು ಹಿಜಾಬ್, ಹಲಾಲ್, ಉರಿ ಗೌಡ, ನಂಜೇಗೌಡ ಎಂದು ಆಡಳಿತ ನಡೆಸಿದ ನಾಟಕ ಮಂಡಳಿಯ ಮುಂದುವರೆದ ಭಾಗ ಈಗ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನ. ಸುಳ್ಳು ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರೆಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ” ಎಂದು ಕುಟುಕಿದ್ದಾರೆ.
“ವಿಜಯೇಂದ್ರ ಅವರ ಸತ್ಯಶೋಧನಾ ಸಮಿತಿ (ಅತ್ತು-ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯಶೋಧನಾ ಸಮಿತಿ) ಅವರ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕಳುಹಿಸಿದ ನೋಟಿಸ್‌ಗಳಿಗೆ ಉತ್ತರ ಕೊಡಲಿ” ಎಂದು ಆಗ್ರಹಿಸಿದ್ದಾರೆ.
ಆ ಬೋಸುಡೀ ದೋಸೇ ಕತೇನೆ ಇಷ್ಟು, ಅವನಿಗಿನ್ನೂ ಕಟ್ಟೆ ಓಡೆದಿಲ್ಲಾ ,ಏನೇನೋ ಓದರತಾನೆ