ವಕ್ಫ್‌ ಆಸ್ತಿ | ಬಿಜೆಪಿ ಅವಧಿಯಲ್ಲೂ ರೈತರಿಗೆ ನೋಟಿಸ್, ಎಂ ಬಿ ಪಾಟೀಲ್ ದಾಖಲೆ ಬಿಡುಗಡೆ

Date:

ವಕ್ಫ್‌ ಆಸ್ತಿ ವಿಚಾರವಾಗಿ ವಿಜಯಪುರ ಜಿಲ್ಲೆಯ ಹಲವು ರೈತರಿಗೆ ನೋಟಿಸ್ ನೀಡಲಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯುತ್ತಿದೆ. ಇದೀಗ, ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ ವಕ್ಸ್‌ನಿಂದ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ದಾಖಲೆ ಬಿಡುಗಡೆ ಮಾಡಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಬಿಜೆಪಿಗರ ನಕಲಿ ಹಿಂದೂ ಪ್ರೇಮದ ಮೊಸಳೆ ಕಣ್ಣೀರು ಬಟಾ ಬಯಲಾಗಿದೆ. 2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟಿಸ್‌ಗಳಿವು” ಎಂದು ದಾಖಲೆಗಳನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ? ರಾಜ್ಯದ ಅಭಿವೃದ್ಧಿ ಬಿಟ್ಟು ಹಿಜಾಬ್, ಹಲಾಲ್, ಉರಿ ಗೌಡ, ನಂಜೇಗೌಡ ಎಂದು ಆಡಳಿತ ನಡೆಸಿದ ನಾಟಕ ಮಂಡಳಿಯ ಮುಂದುವರೆದ ಭಾಗ ಈಗ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನ. ಸುಳ್ಳು ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರೆಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ” ಎಂದು ಕುಟುಕಿದ್ದಾರೆ.

“ವಿಜಯೇಂದ್ರ ಅವರ ಸತ್ಯಶೋಧನಾ ಸಮಿತಿ (ಅತ್ತು-ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯಶೋಧನಾ ಸಮಿತಿ) ಅವರ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕಳುಹಿಸಿದ ನೋಟಿಸ್‌ಗಳಿಗೆ ಉತ್ತರ ಕೊಡಲಿ” ಎಂದು ಆಗ್ರಹಿಸಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...