‘ಯುದ್ಧ ನಿಲ್ಲಿಸಿದರು ಪಪ್ಪಾ’: ಸುಳ್ಳು ಜಾಹೀರಾತಿನಿಂದ ಟ್ರೋಲ್‌ ಆದ ಮೋದಿ

Date:

Advertisements

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಚುನಾವಣೆಗಾಗಿ, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಪ್ರಚಾರದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿದೆ. ಎಲ್ಲ ಟ್ರೋಲ್‌ಗಳಿಗೂ ಆ ವಿಡಿಯೋವನ್ನು ಬಳಸಿಕೊಳ್ಳಲಾಗುತ್ತಿದೆ.

ರಷ್ಯಾ-ಉಕ್ರೇಸ್‌ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದಿದ್ದೇವೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿರುವ ಕೇಂದ್ರ ಸರ್ಕಾರ, ಆ ಬಗ್ಗೆ ಜಾಹೀರಾತನ್ನು ನಿರ್ಮಿಸಿ, ಪ್ರಚಾರ ಪಡೆದುಕೊಳ್ಳುತ್ತಿದೆ. ಆ ಜಾಹೀರಾತಿನಲ್ಲಿ ಕೆಲ ಪೋಷಕರು ಯುದ್ಧಪೀಡಿತ ಉಕ್ರೇನ್‌ನಿಂದ ಬರುತ್ತಿದ್ದ ತಮ್ಮ ಮಕ್ಕಳಿಗಾಗಿ ವಿಮಾನ ನಿಲ್ದಾಣದ ಗೇಟ್‌ನಲ್ಲಿ ಕಾಯುತ್ತಿರುತ್ತಾರೆ ಅಲ್ಲಿಗೆ ಬರುವ ಮಗಳು ಮೋದಿ ಅವರನ್ನು ಹೊಗಳುವುದು ಆ ಜಾಹೀರಾತಿನಲ್ಲಿದೆ.

ಆ ಜಾಹೀರಾತು ವಿಡಿಯೋದಲ್ಲಿ ಯುವತಿಯೊಬ್ಬಳು ತನ್ನ ಹೆತ್ತವರನ್ನು ತಬ್ಬಿಕೊಂಡು ಪ್ರಧಾನಿ ಮೋದಿ ‘ಯುದ್ಧವನ್ನು ನಿಲ್ಲಿಸಿದರು ಪಪ್ಪಾ’ ಎಂದು ಹೇಳುತ್ತಾರೆ.  ಕುತೂಹಲಕಾರಿಯಾಗಿ, ಪ್ರಚಾರದ ವೀಡಿಯೋದಲ್ಲಿ ‘ಯುದ್ಧ’ ನಿಲ್ಲಿಸಿದ ದೇಶ ಯಾವುದು ಎಂದು ಉಲ್ಲೇಖಿಸಿಲ್ಲ.

Advertisements

ಅಂದಹಾಗೆ, ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು, ಮೋದಿ ಅವರು ಮಧ್ಯಸ್ಥಿಕೆ ವಹಿಸಿ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೆಲ ಗಂಟೆಗಳ ಕಾಲ ನಿಲ್ಲಿಸಿದ್ದರು ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಅದರ ಮುಂದುವರಿದ ಪ್ರಚಾರ ಭಾಗವಾಗಿ ಈ ಜಾಹೀರಾತು ವಿಡಿಯೋ ನಿರ್ಮಾಣವಾಗಿದೆ.

2023ರ ಫೆಬ್ರವರಿಯಲ್ಲಿ ಕರ್ನಾಟಕದಲ್ಲಿ ನಡೆದ ಸಾಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು, “22,500 ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಭಾರತಕ್ಕೆ ಕರೆತರಲು ಪ್ರಧಾನಿ ಮೋದಿ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿದರು” ಎಂದು ಹೇಳಿದ್ದರು.

ಆದಾಗ್ಯೂ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ಅರಿಂದಮ್ ಬಾಗ್ಚಿ, ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವನ್ನು ಭಾರತ ನಿಲ್ಲಿಸಿತ್ತೆಂಬ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ಈ ಎಲ್ಲ ಪ್ರತಿಪಾದನೆಗಳು ಸಂಪೂರ್ಣ ಸುಳ್ಳು ಎಂದು ಅವರು ಹೇಳಿದ್ದಾರೆ.

2024ರ ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಈ ಜಾಹೀರಾತು ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ, ವಿಡಿಯೋದ ಪ್ರತಿಪಾದನೆ ಸುಳ್ಳು ಎಂದು ಹಲವಾರು ನೆಟ್ಟಿಗರು ಮೇಮ್‌ಗಳನ್ನು ಮಾಡಿ, ಕೇಂದ್ರ ಸರ್ಕಾರವನ್ನು ಟ್ರೋಲ್‌ ಮಾಡಿದ್ದಾರೆ.

ಜಾಹೀರಾತು ವಿಡಿಯೋದಲ್ಲಿ ಹೇಳಲಾಗಿರುವುದು ಅಪ್ಪಟ ಹಸೀ ಸುಳ್ಳು ಎಂದು ಹಿಂದಿ ಯೂಟ್ಯೂಬರ್ ಧ್ರುವ ರಥಿ ಕೂಡ ವಿಡಿಯೋ ಮಾಡಿದ್ದಾರೆ.

 

 

View this post on Instagram

 

A post shared by Dhruv Rathee (@dhruvrathee)

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಮೋದಿ ಸರ್ಕಾರವನ್ನು ಟ್ರೋಲ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X