ಮುಖ್ಯಮಂತ್ರಿ ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಸಲ್ಲದು: ಸಚಿವ ಕೃಷ್ಣ ಬೈರೇಗೌಡ

Date:

ಮುಖ್ಯಮಂತ್ರಿ ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನು ವ್ಯರ್ಥಗೊಳಿಸುವಂತಿಲ್ಲ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಕಡ್ಡಾಯವಾಗಿ ಹಕ್ಕುಪತ್ರ, ಕ್ರಯಪತ್ರ, ಹಾಗೂ ಇ-ಸ್ವತ್ತು ಮಾಡಿ ಕೊಡ ತಕ್ಕದ್ದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

- Advertisement -

ಸಿಎಂ ಕಾರ್ಯಕ್ರಮ ಸಂಬಂಧ ಶುಕ್ರವಾರ ಹಾಸನದಲ್ಲಿ ನಡೆದ ಜಿಲ್ಲೆಯ ಎಲ್ಲ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಈಗಿನಿಂದಲೇ ಹಕ್ಕುಪತ್ರ ಸೇರಿದಂತೆ ಎಲ್ಲ ದಾಖಲೆಗಳನ್ನೂ ಸಿದ್ದಪಡಿಸಿಕೊಳ್ಳಬೇಕು. ಕಳೆದ ಸರ್ಕಾರದ ಅವಧಿಯಲ್ಲಿ 94c ಹಾಗೂ 94d ಅಡಿಯಲ್ಲಿ 2.50 ಲಕ್ಷ ಹಕ್ಕುಪತ್ರ ನೀಡಿದ್ದರೂ ಸಹ 10600 ಮಾತ್ರ ಇ-ಸ್ವತ್ತು ಆಗಿದೆ. ನಾಮಕಾವಸ್ತೆ ಹಕ್ಕುಪತ್ರ ನೀಡುವ ಪ್ರವೃತ್ತಿ ಇನ್ನಾದರೂ ನಿಲ್ಲಬೇಕು. ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು ಮಾಡಕೊಡಲೇಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಫೌತಿಖಾತೆ ಆಂದೋಲನವನ್ನು ಯಾವ ಕಾರಣಕ್ಕೂ ನಿಲ್ಲಿಸುವಂತಿಲ್ಲ. ಮೃತರ ಹೆಸರಲ್ಲಿರುವ ಜನೀನನ್ನು ಈಗಿನ ವಾರಸುದಾರರ ಹೆಸರಿಗೆ ಬದಲಿಸಲೇಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮಟ್ಟದಲ್ಲೂ ನೋಡಲ್ ಆಫೀಸರ್ ಗಳನ್ನ ನೇಮಕ ಮಾಡಿ ಫಲಾನುಭವಿಗಳನ್ನು ಯಾವುದೇ ಸಮಸ್ಯೆ ಇಲ್ಲದಂತೆ ಕಾರ್ಯಕ್ರಮಕ್ಕೆ ಕರೆತರಬೇಕು” ಎಂದು ಸೂಚನೆ ನೀಡದರು.

“ಫಲಾನುಭವಿಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದೂ ನಮ್ಮ ಕರ್ತವ್ಯ. ಬಸ್ ಗಳ ಜೊತೆ ಬೇರೆ ಬೇರೆ ವಾಹನಗಳನ್ನೂ ಏರ್ಪಾಟು ಮಾಡಬೇಕು. ಕಾರ್ಯಕ್ರಮವನ್ನು ಬೆಳಗ್ಗೆ 11 ಗಂಟೆಯ ಒಳಗೆ ಆರಂಭಿಸಿ ಮಧ್ಯಾಹ್ನ 2.30ರೊಳಗೆ ಮುಗಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಸುಸಜ್ಜಿತವಾಗಿ ಮಾಡಬೇಕು. ವಿಎ ಹಾಗೂ ಪಿಡಿಓಗಳು ತಾವು ಕರೆತಂದ ಜನರನ್ನು ಜೊತೆಗೆ ಕಾರ್ಯಕ್ರಮದಲ್ಲಿ ಕುಳಿತು ಆ ನಂತರ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಬೇಕು. ಹೋಗುವಾಗ ಅವರ ಎಲ್ಲಾ ದಾಖಲೆಗಳೂ ಅವರ ಕೈಯಲ್ಲಿರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...