ಕುಡಿಯುವ ನೀರಿನ ಅಭಾವ | ಬಿಜೆಪಿಯವರು ಟೀಕೆ ಬಿಟ್ಟು ರಚನಾತ್ಮಕ ಸಲಹೆ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Date:

Advertisements

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ. ಅವರು ರಚನಾತ್ಮಕ ಸಲಹೆ ಕೊಟ್ಟರೆ ನಾವು ಸ್ವೀಕರಿಸಲು ಸಿದ್ಧ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಟ್ಯಾಂಕರ್ ಹಾಗೂ ಖಾಸಗಿಯವರನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಮಾಫಿಯಾ ತಡೆಗಟ್ಟಿದ್ದೇವೆ. ಶೇಕಡಾ 50ರಷ್ಟು ಕೊಳವೆಬಾವಿಗಳು ಬರಿದಾಗಿದೆ. ಸಾವಿರಾರು ಟ್ಯಾಂಕ ಗಳನ್ನು ನಾವು ನಿಯಂತ್ರಣಕ್ಕೆ ತೆಗೆದುಕೊಂಡು ನೀರಿನ ಮೂಲಗಳಿರುವ ಕಡೆಗಳಿಂದ ನೀರನ್ನು ಪೂರೈಸಲು ನಿರ್ಧರಿಸಲಾಗಿದೆ.

“ದೂರದಿಂದ ನೀರು ಪೂರೈಸುವ ಕಾರಣ ಟ್ಯಾಂಕರ್ ನೀರಿನ ದರ ನಿಗಧಿಯ ನಿರ್ಧಾರವನ್ನು ಅಧಿಕಾರಿಗಳಿಗೆ ಬಿಟ್ಟಿದ್ದೇವೆ. ಇನ್ನು ರಾಜ್ಯದಲ್ಲಿ ಖಾಲಿ ಇರುವ ದೊಡ್ಡ ಹಾಲಿನ ಟ್ಯಾಂಕರ್ ಗಳನ್ನ ನೀರು ಪೂರೈಸಲು ಬಳಸಲಾಗುವುದು. ಕಾವೇರಿ ನೀರನ್ನು ಸಮರ್ಪಕವಾಗಿ ಪೂರೈಸಲಾಗುತ್ತಿದೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದೆ.

Advertisements

“ಕೊಳವೆ ಬಾವಿಗಳು ಬತ್ತಿದಾಗ ಆಹಾಕಾರಾ ಉದ್ಭವಿಸುತ್ತದೆ. ನಾವು ನೀರು ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಈ ಪರಿಸ್ಥಿತಿಯಲ್ಲಿ ಕುಡಿಯುವ ನೀರನ್ನು ಕಾರು ವಾಹನ ತೊಳೆಯಲು ಹಾಗೂ ಇತರೆ ಬಳಕೆಗೆ ಬಳಸಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇವೆ. ನೀರಿನ ಬೆಲೆ ಎಲ್ಲರಿಗೂ ಅರ್ಥವಾಗಬೇಕು” ಎಂದು ಡಿಸಿಎಂ ತಿಳಿಸಿದರು.

ಇದನ್ನು ಓದಿದ್ದೀರಾ? ಗಾಂಧಿ ಅಥವಾ ಗೋಡ್ಸೆ| ಉತ್ತರಿಸಲು ಸಮಯ ಬೇಕೆಂದ ಇತ್ತೀಚೆಗೆ ಬಿಜೆಪಿ ಸೇರಿದ ನ್ಯಾಯಾಧೀಶ!

“ಖಾಸಗಿ ಟ್ಯಾಂಕರ್ ಗಳು ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸುತ್ತಿವೆ. ಸರ್ಕಾರದ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಪೂರೈಸಲಾಗುತ್ತಿದೆ. ದುರಸ್ತಿ ಇದ್ದ ಘಟಕಗಳನ್ನು ರಿಪೇರಿ ಮಾಡುತ್ತಿದ್ದೇವೆ. ಇನ್ನು ಮೂರ್ನಾಲ್ಕು ತಿಂಗಳು ಈ ಸಮಸ್ಯೆ ಇರುತ್ತವೆ. ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ” ಎಂದು ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X