ಜಲ ವಿವಾದ | ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ : ಸಿಎಂ ಸಿದ್ದರಾಮಯ್ಯ

Date:

Advertisements
  • ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ವಿಚಾರದಲ್ಲಿ ರಾಜಿ ಮಾತೇ ಇಲ್ಲ: ಸಿಎಂ
  • ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆ

ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಮತ್ತು ಸಂಸದರ ಅಭಿಪ್ರಾಯಗಳನ್ನು ಕೇಳಿಸಿಕೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ. 7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ಹೀಗಾಗಿ ಸರ್ವ ಪಕ್ಷ ನಿಯೋಗಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

Advertisements

ಕಾವೇರಿ ಜಲಾನಯನ ಪ್ರದೇಶದಲ್ಲಿ ನಮ್ಮ ರೈತರ ಹಿತವನ್ನು ಸಂಪೂರ್ಣ ಕಾಪಾಡಿದ್ದೇವೆ. ನಮ್ಮ ಬೆಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಸರ್ವ ಪಕ್ಷ ನಾಯಕರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕಾವೇರಿ ಪ್ರಾಧಿಕಾರ 22 ಹಾಗೂ ನಿಯಂತ್ರಣ ಸಮಿತಿಯಲ್ಲಿ 84 ಸಭೆಗಳು ನಡೆದಿವೆ. ರಾಜ್ಯವನ್ನು ಪ್ರತಿನಿಧಿಸುವ ಅಧಿಕಾರಿ ಮತ್ತು ವಕೀಲರ ತಂಡ ವಾಸ್ತವ ಸ್ಥಿತಿಯನ್ನು ಸಮರ್ಥವಾಗಿ ಪ್ರಾಧಿಕಾರದ ಮುಂದೆ, ನಿಯಂತ್ರಣ ಸಮಿತಿ ಮುಂದೆ ಮಂಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಮಾಹಿತಿ ನೀಡಿದರು.

ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದನ್ನು ಹಾಗೂ ಈಗಿನ ವಾಸ್ತವ ಸ್ಥಿತಿಯನ್ನು ಮಂಡಿಸಿದ್ದಾರೆ. ಇಲ್ಲಿಯವರೆಗೂ ನಾವು 24 ಟಿಎಂಸಿ ಮಾತ್ರ ಬಿಡುಗಡೆ ಮಾಡಿದ್ದೇವೆ. ನಿಗದಿ ಮಾಡಿದ್ದಕ್ಕಿಂತ ಕಡಿಮೆ ನೀರು ಬಿಟ್ಟಿದ್ದೀವಿ. ಮೂರನೇ ಒಂದು ಭಾಗದಷ್ಟು ಮಾತ್ರ ನೀರು ಬಿಟ್ಟಿದ್ದೇವಷ್ಟೇ ಎಂದು ಮುಖ್ಯಮಂತ್ರಿ ತಿಳಿಸಿದರು.

ನಾವು ಸಮರ್ಥ ವಾದ ಮಂಡಿಸಿದ್ದರಿಂದಲೇ ತಮಿಳುನಾಡಿನ ಬೇಡಿಕೆಗಿಂತ ಕಡಿಮೆ ನೀರು ಬಿಡಲು ಆದೇಶವಾಯಿತು. ಸಮರ್ಥ ವಾದ ಮಂಡಿಸದಿದ್ದರೆ ಆದೇಶದಲ್ಲಿನ ನೀರಿನ ಪ್ರಮಾಣ ಇನ್ನೂ ಹೆಚ್ಚಿರುತ್ತಿತ್ತು. ನಾಡಿನ ರೈತರ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ರಾಜಕೀಯವೂ ಇಲ್ಲ. ರಾಜಿಯೂ ಇಲ್ಲ. ನಮ್ಮ ಕಾನೂನು ತಂಡಕ್ಕೆ, ತಜ್ಞರ ತಂಡಕ್ಕೆ ಅಗತ್ಯವಾದ ಸಕಲ ನೆರವು ನೀಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾವು 15 ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಿದಾಗ ತಮಿಳುನಾಡಿನವರು ಮಧ್ಯದಲ್ಲಿಯೇ ಎದ್ದು ಹೊರಟು ಹೋಗಿದ್ದಾರೆ. ಬಳಿಕ 10 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶವಾಗಿದೆ. ಈಗ 10 ಸಾವಿರ ಕ್ಯೂಸೆಕ್ ನೀರನ್ನೂ ಬಿಡಲು ಸಾಧ್ಯವಿಲ್ಲ ಎಂದು ಮತ್ತೆ ಸಮರ್ಥ ವಾದವನ್ನು ಸುಪ್ರೀಂ ಕೋರ್ಟಿನಲ್ಲಿ ಮಂಡಿಸುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮತ್ತೆ ಮಳೆ ಬರುವ ಸೂಚನೆ ಕಾಣುತ್ತಿಲ್ಲ. ಆದ್ದರಿಂದ ಸಂಕಷ್ಟ ಹಂಚಿಕೆ ಸೂತ್ರ ವೈಜ್ಞಾನಿಕವಾಗಿ ಆಗಲೇಬೇಕು. ಮೇಕೆದಾಟು ಆದರೆ ಕುಡಿಯುವ ನೀರಿನ ಸಮಸ್ಯೆ ಬಹುತೇಕ ಕಡಿಮೆ ಮಾಡಬಹುದು ಎಂದು ಸಿಎಂ ಅಭಿಪ್ರಾಯಿಸಿದರು.

ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ್, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್‌, ಕೃಷ್ಣಭೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ....

Download Eedina App Android / iOS

X