ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್ 13ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿದ್ದರು. ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.
ವಯನಾಡ್ ಮೂಲಕ ಚುನಾವಣಾ ಅಖಾಡಕ್ಕೆ ಧುಮುಕುತ್ತಿರುವ 52 ವರ್ಷದ ಪ್ರಿಯಾಂಕಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಗಾಂಧಿ ಕುಟುಂಬದಿಂದ ಮೂವರು ಸಂಸತ್ತಿಗೆ ಪ್ರವೇಶಿಸಿದಂತಾಗುತ್ತದೆ. ನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜಸಭೆಗೆ ಆಯ್ಕೆಯಾಗಿದ್ದಾರೆ.