ಕೇಂದ್ರದ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

Date:

Advertisements
  • ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮುಂದಾದ ಕೇಂದ್ರ ಸರ್ಕಾರ
  • 40% ಕಮಿಷನ್ ಪಡೆದಿರುವುದಕ್ಕೆ ಬಿಜೆಪಿಯನ್ನು ಜನ ಕಿತ್ತೊಗೆದಿದ್ದಾರೆ’

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರ ಕೂಡ ವಿರೋಧ ವ್ಯಕ್ತಪಡಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ರಾಜ್ಯ ವಕೀಲರ ಪರಿಷತ್ ಆಯೋಜಿಸಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಭಾಗವಹಿಸಲು ಶನಿವಾರ ಮೈಸೂರಿಗೆ ಆಗಮಿಸಿದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

“ಕೇಂದ್ರ ಸರ್ಕಾರ ಐಪಿಸಿ ಸೆಕ್ಷನ್‌ಗಳ ಹೆಸರನ್ನು ಬದಲಾಯಿಸಿದೆ. 1861 ರಲ್ಲಿ ಜಾರಿಯಾದ ಕಾನೂನುಗಳನ್ನು ಬದಲಾಯಿಸಲು ಹೊರಟಿದೆ. ಏನು ಮಾಡಲಿದ್ದಾರೆ ಕಾದು ನೋಡೋಣ. ಇವರು ಬದಲಾಯಿಸುವ ಮೊದಲು ತಿದ್ದುಪಡಿ ಮಾಡಬೇಕಿತ್ತು” ಎಂದರು.

Advertisements

ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ

“ಬಿಜೆಪಿಯವರು 40% ಕಮಿಷನ್ ಪಡೆದು ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಅವರಲ್ಲಿ ಉಳಿದಿಲ್ಲ. ತನಿಖೆ ನಡೆಯುತ್ತಿದೆ. ನಂತರ ಎಲ್ಲ ಸತ್ಯಾಸತ್ಯತೆ ಗೊತ್ತಾಗಲಿದೆ” ಎಂದು ಹೇಳಿದರು.

ಎಸ್ಐಟಿ ತನಿಖೆಗೆ ವಹಿಸಿದ್ದೇವೆ

“ಬಿಜೆಪಿ ಸರ್ಕಾರ 40% ಕಮಿಷನ್ ಪಡೆದಿರುವುದಕ್ಕೆ ಜನ ಆ ಸರ್ಕಾರವನ್ನು ಕಿತ್ತೊಗೆದಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು. ಹಾಗಾಗಿ ಗುತ್ತಿಗೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಎಸ್ಐಟಿ ತನಿಖೆಗೆ ವಹಿಸಿದ್ದೇವೆ. ವರದಿ ಬಂದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡಿರುವ ಗುತ್ತಿಗೆದಾರರ ಹಣ ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಅಧಿಕ ಮಳೆ ಆಗದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಆದರೂ ಕಾವೇರಿ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಿ ಎಂದಿದೆ. ಈ ಬಗ್ಗೆ ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ತನಿಖೆಯಿಂದ ಬಿಜೆಪಿಯವರ ಕಮಿಷನ್ ಕರ್ಮಕಾಂಡ‌ ಬಯಲಾಗಲಿದೆ: ದಿನೇಶ್‌ ಗುಂಡೂರಾವ್

ನ್ಯಾಯಾಲಯದ ಆದೇಶದ ಪ್ರಕಾರ ಚುನಾವಣೆ

“ಸ್ಥಳೀಯ ಸಂಸ್ಥೆಗಳಾದ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿಗಳಿಗೆ ಚುನಾವಣೆ ನಡೆಸಲು ನಮ್ಮ ಸರ್ಕಾರ ಸಿದ್ಧವಿದ್ದು, ನ್ಯಾಯಾಲಯದ ಆದೇಶದ ಪ್ರಕಾರ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ” ಎಂದು ತಿಳಿಸಿದರು.

ಪ್ರಾಣಕ್ಕೆ ತೊಂದರೆ ಇಲ್ಲ

“ಬಿಬಿಎಂಪಿಯಲ್ಲಿ ನಡೆದಿರುವ ಬೆಂಕಿ ಪ್ರಕರಣದಲ್ಲಿ 9 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಪ್ರಕಾರ 30% ಗಾಯಗಳಾಗಿವೆ, ಪ್ರಾಣಕ್ಕೆ ತೊಂದರೆ ಇಲ್ಲ ಎಂದಿದ್ದಾರೆ. 48 ಗಂಟೆಗಳ ಕಾಲ ನಿಗಾವಹಿಸಬೇಕು, ನಂತರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದಿದ್ದಾರೆ. ಸದ್ಯ ಗಾಯಾಳುಗಳಿಗೆ ಉತ್ತಮ ರೀತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X