ವಕ್ಫ್ ಮಸೂದೆಯ ಸರ್ವಾಧಿಕಾರಿ, ಏಕಪಕ್ಷೀಯ ಅಂಗೀಕಾರವನ್ನು ಬಲವಾಗಿ ಖಂಡಿಸುತ್ತೇವೆ: ಸ್ವರಾಜ್ ಇಂಡಿಯಾ

Date:

ಕೇಂದ್ರ ಸರ್ಕಾರವು ವಕ್ಫ್ ಮಸೂದೆಯನ್ನು ಏಕಪಕ್ಷೀಯವಾಗಿ ಅಂಗೀಕರಿಸಿರುವುದನ್ನು ಸ್ವರಾಜ್ ಇಂಡಿಯಾ ತೀವ್ರವಾಗಿ ಖಂಡಿಸಿದೆ. ಇದು ಸರ್ವಾಧಿಕಾರಿ ನಡೆ, ಭಾರತದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಗಂಭೀರ ಹೊಡೆತ ಎಂದು ಸ್ವರಾಜ್ ಇಂಡಿಯಾ ಹೇಳಿದೆ.

- Advertisement -

“ಅಧಿಕ ಸಾರ್ವಜನಿಕ ಚರ್ಚೆ ನಡೆಸದೆಯೇ ಸಂಸತ್ತಿನ ಮೂಲಕ ಪರಿಚಯಿಸಿ ಈ ಶಾಸನವನ್ನು ಅಂಗೀಕರಿಸಲಾಗಿದೆ. ಇದು ಸಾಂವಿಧಾನಿಕ ತತ್ವಗಳ ಸ್ಪಷ್ಟ ಉಲ್ಲಂಘನೆ. ಧಾರ್ಮಿಕ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳಿಗೆ ಅವಮಾನವಾಗಿದೆ” ಎಂದು ಬೆಂಗಳೂರಿನ ಸ್ವರಾಜ್ ಇಂಡಿಯಾದ ಅಧ್ಯಕ್ಷ ವಿಜಯ್ ಕುಮಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾದ ಆರ್‌ಜೆಡಿ ನಾಯಕರು

“ಯಾವುದೇ ಸಮುದಾಯ ಆಸ್ತಿ, ಧಾರ್ಮಿಕ ಸ್ವಾತಂತ್ರ್ಯ ಅಥವಾ ಆಸ್ತಿ ಹಕ್ಕುಗಳ ಮೇಲೆ ಪರಿಣಾಮ ಬೀರುವ ಯಾವುದೇ ಕಾನೂನು ಜಾರಿಗೆ ತರುವಾಗ ಅದರ ಬಗ್ಗೆ ಅಧಿಕ ಚರ್ಚೆ ನಡೆಯಬೇಕು. ಧಾರ್ಮಿಕ ಸಂಸ್ಥೆಗಳು, ರಾಜ್ಯ ಸರ್ಕಾರಗಳು, ಕಾನೂನು ತಜ್ಞರು, ಇತರೆ ಸಂಘಟನೆಗಳ ಜೊತೆ ಚರ್ಚಿಸದೆ ಜಾರಿಗೆ ತರಲಾದ ವಕ್ಫ್ ಮಸೂದೆಯು ಸರ್ವಾಧಿಕಾರ ನಡೆಯ ಅಪಾಯವನ್ನು ತೋರಿಸುತ್ತದೆ” ಎಂದು ತಿಳಿಸಿದ್ದಾರೆ.

“ಈ ಮಸೂದೆ ಕೇವಲ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡುವುದಲ್ಲ, ಬದಲಾಗಿ ಭಾರತದ ಬಹುತ್ವದ ರಚನೆಯನ್ನೇ ಬದಲಾಯಿಸುತ್ತದೆ” ಎಂದು ಸ್ವರಾಜ್ ಇಂಡಿಯಾದ ಮುಖಂಡ ಗುಲಾಬ್ ಪಾಷಾ ಹೇಳಿದರು.

ವಕ್ಫ್ ಮಸೂದೆಗೆ ಒಪ್ಪಿಗೆ ನೀಡದಂತೆ ಭಾರತದ ರಾಷ್ಟ್ರಪತಿಗಳಿಗೆ ಕರೆ ನೀಡಿದೆ. ಹಾಗೆಯೇ ಈ ಕಾನೂನು ಬಾಹಿರ ಮಸೂದೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಶನಿವಾರ (ಏಪ್ರಿಲ್ 5) ಪತ್ರಿಕಾ ಹೇಳಿಕೆಯಲ್ಲಿ ಸ್ವರಾಜ್ ಇಂಡಿಯಾ ತಿಳಿಸಿದೆ. ಭಾನುವಾರ ಬೆಳಿಗ್ಗೆಯೇ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಈ ಮಸೂದೆಗೆ ಅಂಕಿತ ಹಾಕಿದ್ದಾರೆ.

“ಬಲವಂತ ಮತ್ತು ಕೇಂದ್ರೀಕರಣದ ಮೂಲಕ ಭಾರತವನ್ನು ಆಳಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ವಿಕೇಂದ್ರೀಕೃತ ಪ್ರಜಾಪ್ರಭುತ್ವ, ಜಾತ್ಯತೀತ ಆಡಳಿತ ಮತ್ತು ಸಾಂವಿಧಾನಿಕ ನೈತಿಕತೆಯನ್ನು ದೃಢವಾಗಿ ಬೆಂಬಲಿಸುತ್ತದೆ. ಈ ಮೂಲಭೂತ ಆದರ್ಶಗಳನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನೂ ವಿರೋಧಿಸುತ್ತದೆ” ಎಂದು ಸ್ವರಾಜ್ ಇಂಡಿಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ವಾರದ ಆರಂಭದಲ್ಲಿ 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದವು. ನಿರೀಕ್ಷೆಯಂತೆ 288 ಮತಗಳು ಮಸೂದೆ ಪರವಾಗಿ, 232 ಮತಗಳು ಮಸೂದೆ ವಿರುದ್ಧವಾಗಿ ಚಲಾವಣೆಯಾದವು. ರಾಜ್ಯಸಭೆಯಲ್ಲಿ, ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು. ಈ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಿದ್ದು, ಇದೀಗ ವಿವಿಧ ರಾಜ್ಯಗಳಲ್ಲಿ ಈ ಕಾನೂನು ಅಂಗೀಕಾರವಾಗಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮಮಂದಿರದ ಬಾಣ ಖಾಲಿ: 2029ರ ಲೋಕಸಭೆಗೆ ‘ಯುಸಿಸಿ’ ಅಸ್ತ್ರಕ್ಕಾಗಿ ತಡಕಾಡುತ್ತಿರುವ ಅಮಿತ್ ಶಾ

ರಾಮಮಂದಿರದ ಭಾವನಾತ್ಮಕ ಅಲೆ ಚುನಾವಣೆಯಲ್ಲಿ ತಣಿಯುತ್ತಿದ್ದಂತೆ, 'ಮೋಶಾ' ಜೋಡಿ 2029ಕ್ಕಾಗಿ ಸಮಾನ...

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...