ಶತ್ರು ಭೈರವಿ ಯಾಗ ಮಾಡಿ ನಾವು ಗೆದ್ದಿಲ್ಲ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಲೇವಡಿ

Date:

ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

- Advertisement -

ಮಂಡ್ಯ ಲೋಕಸಭೆ ಫಲಿತಾಂಶದ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ” ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

“ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದರು.

“ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರು ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ, ಬಿಡುವುದೂ ಇಲ್ಲ” ಎಂದರು.

“ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಅಲ್ಲಿಯೂ ನಮ್ಮ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಜಯ ಗಳಿಸಿದ್ದಾರೆ. ಜನರು ನಮ್ಮನ್ನು ಆಶೀರ್ವದಿಸಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ನಾಡಿನ ಅಭಿವೃದ್ಧಿಗಾಗಿ ಮೋದಿ ಅವರ ಜತೆಗೂಡಿ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಅವರು ಸೋತಿರುವ ಬಗ್ಗೆ ಪ್ರತಿಕ್ರಿಯಿಸಿ, “ರಾಜಕೀಯ ಷಡ್ಯಂತ್ರದಿಂದ ಹಾಸನ ಸೋತಿದ್ದೇವೆ” ಎಂದಷ್ಟೇ ಹೇಳಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...