ಬೆಂಗಳೂರು ಉತ್ತರಕ್ಕೆ ಶೋಭಕ್ಕ ಬೇಡ: ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೆ ‘ಗೋ ಬ್ಯಾಕ್’ ಅಭಿಯಾನ ಆರಂಭ

Date:

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ, ಟಿಕೆಟ್ ಘೋಷಣೆಯಾದ ಮೇಲೂ ಮುಂದುವರಿದಿದೆ.

- Advertisement -

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ ಗೋ ಬ್ಯಾಕ್ ಅಭಿಯಾನದ ಫಲಾನುಭವಿಯಾಗುವ ನಿರೀಕ್ಷೆಯಲ್ಲಿದ್ದ ಸಿ ಟಿ ರವಿ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೀರು ಎರಚಿತ್ತು. ಆದರೆ ಇದು ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ವರದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಕಳೆದ ಕೆಲವು ತಿಂಗಳಿನಿಂದ ಶೋಭಾ ಕರಂದ್ಲಾಜೆ ಎಲ್ಲೇ ಹೋದರೂ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಎದುರಾಗಿತ್ತು. ಆದಾಗ್ಯೂ, ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಕೃಪಕಟಾಕ್ಷದಿಂದ ಬೆಂಗಳೂರು ಉತ್ತರದಿಂದ ಶೋಭಾ ಅವರಿಗೆ ಟಿಕೆಟ್ ಸಿಕ್ಕಿದೆ.

ಈ ಟಿಕೆಟ್ ಘೋಷಣೆ ಬೆನ್ನಲ್ಲೇ ರೊಚ್ಚಿಗೆದ್ದಿರುವ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಬೆಂಬಲಿಗರು, ನಮ್ಮ ಕ್ಷೇತ್ರಕ್ಕೆ ಶೋಭಕ್ಕ ಬೇಡ. ಬೇರೆ ಕ್ಷೇತ್ರದ ಕಸವನ್ನು ತಂದು ನಮ್ಮಲ್ಲಿ ಸುರಿಯಬೇಡಿ ಎನ್ನುತ್ತಾ ‘ಗೋ ಬ್ಯಾಕ್’ ಅಭಿಯಾನ ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಬಿಜೆಪಿ 2ನೇ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಯಾರಿಗೆಲ್ಲ ಸಿಕ್ಕಿದೆ ಟಿಕೆಟ್?

ಈ ಬಗ್ಗೆ ಮಾತನಾಡಿರುವ ಸ್ಥಳೀಯ ಬಿಜೆಪಿ ಮುಖಂಡರೋರ್ವರು, ”ನಮ್ಮ ಕ್ಷೇತ್ರದ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಬೇಡ. ಅವರು ನಮ್ಮ ಕ್ಷೇತ್ರದವರೂ ಅಲ್ಲ. ಹಾಗಾಗಿ, ಸ್ಥಳೀಯ ಒಕ್ಕಲಿಗ ಸಮುದಾಯದ ಬಿಜೆಪಿ ಮುಖಂಡರಿಗೆ ಆದ್ಯತೆ ನೀಡಿ, ಟಿಕೆಟ್ ಕೊಡಿ. ಅಭ್ಯರ್ಥಿ ಬದಲಾಯಿಸಿ” ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.

“ಮೋದಿ ಗೆಲ್ತಾರೆ, ಬಿಜೆಪಿ ಗೆಲ್ಲಬೇಕು ಅಂದರೆ ಶೋಭಾ ಕರಂದ್ಲಾಜೆ ಹಠಾವೋ, ಬೆಂಗಳೂರು ಉತ್ತರ ಬಿಜೆಪಿ ಬಚಾವೋ” ಎಂಬಿತ್ಯಾದಿ ಪೋಸ್ಟರ್‌ಗಳನ್ನು ಹಿಡಿದುಕೊಂಡು, ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.

ಹಗ್ಗಜಗ್ಗಾಟದಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಶೋಭಾ ಕರಂದ್ಲಾಜೆ!

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ಬಾರಿ ಸಂಸದೆಯಾಗಿದ್ದರೂ, ಕಾರ್ಯ ವೈಖರಿಯಿಂದ ಅಸಮಾಧಾನಗೊಂಡಿದ್ದ ಬಿಜೆಪಿ ಕಾರ್ಯಕರ್ತರು, ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ‘ಗೋ ಬ್ಯಾಕ್ ಶೋಭಕ್ಕ’ ಅಭಿಯಾನ ಆರಂಭಿಸಿದ್ದರು. ಈ ಅಸಮಾಧಾನದ ಬೆನ್ನಲ್ಲೇ, ಡಿ ವಿ ಸದಾನಂದ ಗೌಡ ಎರಡು ಬಾರಿ ಪ್ರತಿನಿಧಿಸಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಿ ಟಿ ರವಿ ಹೆಸರು ಕೇಳಿ ಬಂದಿತ್ತಾದರೂ, ಕೊನೆಗೆ ವಿಧಾನ ಪರಿಷತ್‌ನ ವಿಪಕ್ಷ ನಾಯಕ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದೆ. ಇದು ಅಚ್ಚರಿ ಮೂಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...