ಸಮಾಜದ ಗೌರವಕ್ಕಾಗಿ ದೇವೇಗೌಡರ ಅಪಮಾನ ಸಹಿಸಿಕೊಂಡಿದ್ದೇವೆ: ಮಾಜಿ ಸಂಸದ ಡಿ ಕೆ ಸುರೇಶ್‌

Date:

ದೇವೇಗೌಡರು ಬಾಲಗಂಗಾಧರನಾಥ ಸ್ವಾಮೀಜಿಗಳನ್ನೇ ಬಿಡಲಿಲ್ಲ, ಇನ್ನು ಈ ಸಮಾಜದ ಬೇರೆಯವರನ್ನು ಬಿಡುತ್ತಾರಾ. ಜೆಡಿಎಸ್ ಕಾರ್ಯಕರ್ತರೇ ಜಾತಿ ವ್ಯಾಮೋಹಕ್ಕೆ ಹೋಗಬೇಡಿ. ಯೋಗೇಶ್ವರ್ ಕೂಡ ಒಕ್ಕಲಿಗನೇ. ನಾನು ಒಕ್ಕಲಿಗನೇ. ಬಾಲಕೃಷ್ಣ ಅವರೂ ಒಕ್ಕಲಿಗರೇ. ದೇವೇಗೌಡರು, ಕುಮಾರಸ್ವಾಮಿ ಅವರು ನಮ್ಮನ್ನು ಕಳ್ಳರು, ಸುಳ್ಳರು ಎಂದು ಹೇಳುತ್ತಿದ್ದಾರೆ. ನಾವು ಅವರ ಅಪಮಾನವನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಉತ್ತರ ಕೊಡಬಲ್ಲೆ. ಆದರೆ ಈ ಸಮಾಜದ ಗೌರವಕ್ಕಾಗಿ ನನ್ನ ಮಾತನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡಿದ್ದೇವೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್‌ ಹೇಳಿದರು.

- Advertisement -

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡಮಳೂರಿನಲ್ಲಿ ಸೋಮವಾರ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಡಿ.ಕೆ. ಸುರೇಶ್ ಅವರು ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಮತಯಾಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಚನ್ನಪಟ್ಟಣ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ ಯೋಗೇಶ್ವರ್, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸೇವೆ ಮಾಡುತ್ತೇವೆ” ಎಂದರು.

“ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಕ್ಷೇತ್ರದ ಜನರ ಕಷ್ಟ ಕೇಳಲು ಒಂದೇ ಒಂದು ದಿನ ಬರಲಿಲ್ಲ. ಜನರ ಕಷ್ಟ ಕೇಳುವುದಿರಲಿ, ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮಸ್ಯೆಯನ್ನು ಆಲಿಸಲಿಲ್ಲ. ಅವರು ಸಿಎಂ ಆಗಿದ್ದಾಗ ನಿಮ್ಮ ಕಷ್ಟ ಆಲಿಸಿದ್ದಾರಾ ಎಂದು ಆತ್ಮಸಾಕ್ಷಿಯಿಂದ ಹೇಳಿ ಎಂದು ಆ ಕಾರ್ಯಕರ್ತರಲ್ಲಿ ಕೇಳಲು ಬಯಸುತ್ತೇನೆ. ಅವರ ಬಗ್ಗೆ ನಿಮಗೆ ಇಷ್ಟು ಅಂಧ ಅಭಿಮಾನ ಯಾಕೆ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸುತ್ತಿರುವ ದೇವೇಗೌಡರು, ಪ್ರಜ್ವಲ್ ಕೃತ್ಯ ಖಂಡಿಸುವುದಿಲ್ಲವೇಕೆ?

“ಈ ಉಪಚುನಾವಣೆಗೆ ಬಂದಿರುವ ಕುಮಾರಸ್ವಾಮಿ ಅವರು ಎಲ್ಲಾದರೂ ಈ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರಾ? ಅವರಿಗೆ ಕನಸಲ್ಲೆಲ್ಲಾ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಯೋಗೇಶ್ವರ್, ಸಿದ್ದರಾಮಯ್ಯ ಅವರದ್ದೇ ಕನವರಿಕೆ. ಇವರ ಹೊರತಾಗಿ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದಾರಾ? ಯೋಗೇಶ್ವರ್ ಈ ತಾಲೂಕಿಗೆ ನೀರು ನೀಡಿದ್ದಾರೆ. ನಾವು ಈ ತಾಲೂಕಿಗೆ ವಿದ್ಯುತ್ ನೀಡಿದ್ದೇವೆ, ಗ್ಯಾರಂಟಿ ಯೋಜನೆ ನೀಡಿದ್ದೇವೆ ಎಂದು ಮತ ಕೇಳುತ್ತಿದ್ದೇವೆ” ಎಂದರು.

“ದೇವೇಗೌಡರೇ ನಾನು ಯಾವ ವಿಚಾರ ಮಾತನಾಡಲಿ, ನನಗೆ ಹೃದಯ ಇದೇಯೇ? ಇಲ್ಲವಲ್ಲ? ಕಣ್ಣೀರು ಹಾಕುವವರಿಗೆ ಹೃದಯ ಇರಬೇಕು ಎಂದಿದ್ದೀರಿ. ನಿಮ್ಮ ಹೃದಯ ಯಾವಾಗ ಕೆಲಸ ಮಾಡಬೇಕಿತ್ತು ಗೊತ್ತಾ? ನಿಮ್ಮನ್ನು ಸಾಕಿ ಸಲುಹಿ ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಧಾನಮಂತ್ರಿ ಸ್ಥಾನದವರೆಗೂ ಬೆಳೆಸಿದರಲ್ಲಾ ಅಂತಹ ತಾಯಂದಿರ ಮಾನವನ್ನು ನಿಮ್ಮ ಮೊಮ್ಮಕ್ಕಳು ಹಾರಾಜು ಹಾಕುವಾಗ ಕಣ್ಣೀರು ಹಾಕಬೇಕಿತ್ತು. ನನ್ನ ಮೊಮ್ಮಕ್ಕಳು ತಪ್ಪು ಮಾಡಿದ್ದಾರೆ. ನನ್ನನ್ನು ಕ್ಷಮಿಸಿ ಎಂದು ಕೇಳಬೇಕಿತ್ತು. ಆಗ ನಿಮ್ಮ ಆತ್ಮಗೌರವ ಉಳಿದು, ಘನತೆ ಹೆಚ್ಚುತ್ತಿತ್ತು” ಎಂದು ಕುಟುಕಿದರು.

“ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ನಿಮ್ಮ ಸೇವೆ ಮಾಡಲು ಶಕ್ತಿ ನೀಡಿ. ನಾವೆಲ್ಲರೂ ಈ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಿ ಈ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇವೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ 500 ಕೋಟಿ ವಿಶೇಷ ಅನುದಾನ ತಂದು ಅಭಿವೃದ್ಧಿ ಕೆಲಸ ಆರಂಭಿಸಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...