ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ನಮಗೆ ಅಧಿಕಾರವಿಲ್ಲ: ಮಾಜಿ ಸಿಎಂ ಡಿ ವಿ ಸದಾನಂದಗೌಡ

Date:

ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ, “ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ನಮಗೆ ಅಧಿಕಾರವಿಲ್ಲ. ಅವರ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ” ಎಂದು ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ ಎಂಬ ಕಾಂಗ್ರೆಸ್‌ನವರ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ ಈ ರೀತಿ ಹೇಳಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಿನ್ನೆ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಈಗಾಗಲೇ ತಿಳಿಸಿದ್ದಾರೆ. ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ನಮಗೆ ಅಧಿಕಾರವಿಲ್ಲ. ಯತ್ನಾಳ್ ನೀಡುತ್ತಿರುವ ಹೇಳಿಕೆಯ ಬಗ್ಗೆ ನಾವು ಯಾರೂ ಕೂಡ ಇಲ್ಲಿ ಮಾತನಾಡುವ ಅವಶ್ಯಕತೆ ಇಲ್ಲ. ಅದನ್ನು ಕೇಂದ್ರದ ವರಿಷ್ಠರ ಗಮನಕ್ಕೆ ತಂದು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿದ್ದಾರೆ” ಎಂದು ತಿಳಿಸಿದರು.

“ಶಾಸಕರು ಮತ್ತು ಅದರ ಮೇಲ್ಪಟ ಜವಾಬ್ದಾರಿ ಇರುವವರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿದ್ದರೂ ಕೇಂದ್ರದ ನಾಯಕರೇ ತೆಗೆದುಕೊಳ್ಳಬೇಕು. ನಾವು ಏನಿದ್ದರೂ ಇಲ್ಲಿಯ ಬೆಳವಣಿಗೆಗಳ ಬಗ್ಗೆ ಮಾಹಿತಿಯನ್ನಷ್ಟೇ ಕೊಡಬಹುದು. ಹಾಗಾಗಿ, ಶಾಸಕ ಯತ್ನಾಳ್ ಅವರ ಹೇಳಿಕೆಗಳ ಬಗ್ಗೆ ನಾವು ಯಾರೂ ಮಾತನಾಡುವುದಿಲ್ಲ” ಎಂದು ಸದಾನಂದಗೌಡ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ: ಸಚಿವ ಎಂ ಬಿ ಪಾಟೀಲ್

‘ಬಿಜೆಪಿಯವರ ದೌರ್ಬಲ್ಯವೆಲ್ಲವೂ ಯತ್ನಾಳ್ ಅವರ ಬಳಿಯಲ್ಲಿದೆ’ ಎಂಬ ಕಾಂಗ್ರೆಸ್‌ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್‌ನವರಿಗೆ ಈಗ ಅಧಿಕಾರ ಸಿಕ್ಕಿ ಆರು ತಿಂಗಳಾಯಿತಷ್ಟೇ. ಅಷ್ಟರಲ್ಲೇ ಅವರ ಹಣೆಬರಹ ಎಲ್ಲವೂ ಜಗಜ್ಜಾಹೀರಾಗಿದೆ. ಯಾವುದೇ ಅಭಿವೃದ್ಧಿ ಕೆಲಸಕಾರ್ಯಗಳು ಆಗುತ್ತಿಲ್ಲ. ಪ್ರತಿಯೊಬ್ಬರೂ ಬೀದಿಗಿಳಿಯುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣ ಆಗಿದೆ. ಪೊಲೀಸ್ ಇಲಾಖೆಯನ್ನು ತಮ್ಮ ಕೈಯ್ಯಲ್ಲಿಟ್ಟುಕೊಂಡಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದೆಲ್ಲವನ್ನೂ ಜನರು ಅರ್ಥಮಾಡಿಕೊಂಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿಯ ಹೊಸ ತಂಡ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದೆ” ಎಂದು ಎಚ್ಚರಿಸಿದ ಸದಾನಂದಗೌಡ, “ನಮ್ಮ ಜಿಲ್ಲಾ ಘಟಕ, ಮಂಡಲ ಘಟಕಗಳು ರಚನೆಯಾದ ಬಳಿಕ ಯಾವ ಮಂತ್ರಿಯೂ ಕೂಡ ಬೀದಿಗಿಳಿಯುವ ಹಾಗಿಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...