ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣ ನ್ಯಾಯಾಂಗ ತನಿಖೆಗೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

Advertisements
  • ‘ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ
  • ಗುತ್ತಿಗೆದಾರರಿಗೆ ಭಯ ಬೇಡ, ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?

ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪತ್ರಿಕಾ ಪ್ರಕಟಣೆಯನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಮತ್ತು ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕಾ? ಎಂದು ಹೇಳಿದ್ದಾರೆ.

“ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್. ಅಶೋಕ್ ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾಗಿದೆ. ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ” ಎಂದು ಕುಟುಕಿದ್ದಾರೆ.

Advertisements

“ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಜನರಿಗೆ ನೀಡಿದ್ದ ವಚನ ಪಾಲನೆ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ಗುತ್ತಿಗೆದಾರರಿಗೆ ಭಯ ಬೇಡ

“ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ. ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ. ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ” ಎಂದಿದ್ದಾರೆ.

“ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

“ಈಗಾಗಲೇ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ. P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X