ನಮ್ಮಲ್ಲಿ ಒಳಜಗಳ ಇಲ್ಲ, ಬಿಜೆಪಿ ರಾಜಕೀಯಕ್ಕಾಗಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ’ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ, “ಬಿಜೆಪಿಯವದು ಕೇವಲ ರಾಜಕೀಯ ಹೇಳಿಕೆ ಅಷ್ಟೇ” ಎಂದು ತಿಳಿಸಿದರು.

“ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು” ಎಂದರು.

Advertisements

ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ” ಎಂದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ, “ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು. ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ” ಎಂದು ಹೇಳಿದರು.

ಹಿಟ್ ಅಂಡ್ ರನ್ ಕೇಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ .ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ಹೇಳಿದರು.

ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ “ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X