ನಾವು ಯಾವುದೇ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ; ಅಮಿತ್ ಶಾಗೆ ಡಿಕೆಶಿ ತಿರುಗೇಟು

Date:

  • ಲಿಂಗಾಯತ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಗೊಂದಲದಲ್ಲಿದೆ
  • ಯಡಿಯೂರಪ್ಪಗೆ ಯಾವ ಬೆದರಿಕೆ ಹಾಕಲಾಗಿತ್ತು ಎಂಬುದು ತಿಳಿದಿದೆ

“ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಡಿ.ಕೆ ಶಿವಕುಮಾರ್, ‘ಕಾಂಗ್ರೆಸ್ ಲಿಂಗಾಯತ ಮುಖ್ಯಮಂತ್ರಿಗಳಿಗೆ ತಮ್ಮ ಅವಧಿ ಪೂರ್ಣಗೊಳಿಸಲು ಅವಕಾಶ ನೀಡಿಲ್ಲ’ ಎಂಬ ಅಮಿತ್ ಶಾ ಅವರ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ರಾಜ್ಯ ರಾಜಕೀಯ ಇತಿಹಾಸದ ಬಗ್ಗೆ ಅಮಿತ್ ಶಾಗೆ ಗೊತ್ತಿಲ್ಲ. ನಾವು ಅವರಂತೆ ಯಾವುದೇ ಮುಖ್ಯಮಂತ್ರಿಯಿಂದ ಕಣ್ಣೀರು ಹಾಕಿಸಿಲ್ಲ. ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗೆ ಇಳಿಯುವಾಗ ಯಾವ ಮಾತು ಆಡಿದ್ದಾರೆ. ಅದಕ್ಕೆ ಕಾರಣವೇನು” ಎಂದು ಪ್ರಶ್ನಿಸಿದ್ದಾರೆ.

“ಯಡಿಯೂರಪ್ಪ ಅವರಿಗೆ ಯಾವ ರೀತಿ ಬೆದರಿಕೆ ಹಾಕಲಾಗಿತ್ತು ಎಂಬ ವಿಷಯ ನನಗೆ ಗೊತ್ತಿದೆ. ಈಗ ಆ ವಿಚಾರವಾಗಿ ಮಾತನಾಡುವುದಿಲ್ಲ. ಬಿಜೆಪಿಗೆ ಯಡಿಯೂರಪ್ಪ ಅವರ ಕಣ್ಣೀರಿನ ಶಾಸ್ತಿ ಆಗಲಿದೆ. ಜಗದೀಶ್ ಶೆಟ್ಟರ್ ಹಾಗೂ ಸವದಿ ಅವರು ಕಣ್ಣೀರು ಹಾಕದಿರಬಹುದು. ಅವರ ಮನಸ್ಸು ಅತ್ತಿದೆ” ಎಂದಿದ್ದಾರೆ.

ಮುಸ್ಲಿಮರ ಮೀಸಲಾತಿ ಕುರಿತು ಅಮಿತ್ ಶಾ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ಒಕ್ಕಲಿಗರಾಗಲಿ, ಲಿಂಗಾಯತರಾಗಲಿ, ಬೇರೆಯವರ ಮೀಸಲಾತಿ ಕಿತ್ತು ನಮಗೆ ಶೇ.2ರಷ್ಟು ಮೀಸಲಾತಿ ನೀಡಬೇಕೆಂದು ಕೇಳಿರಲಿಲ್ಲ” ಎಂದು ಹೇಳಿದ್ದಾರೆ.

“ಮೀಸಲಾತಿ ಮಿತಿಯನ್ನು ವಿಸ್ತರಿಸಿ ಈ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಒತ್ತಾಸೆ. ಮುಸಲ್ಮಾನರಿಗೂ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಸಿಗಬೇಕಾದ ಮೀಸಲಾತಿ ಸಿಗಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಾಮಾಣಿಕರನ್ನು ಬಿಜೆಪಿ ಹೊರಹಾಕುತ್ತಿದೆ: ರಾಹುಲ್ ಗಾಂಧಿ

“ಬೇರೆ ರಾಜ್ಯಗಳಲ್ಲೂ ಮೀಸಲಾತಿ ಮಿತಿಯನ್ನು ಮೀರಿದೆ. ಹೀಗಾಗಿ ಕಾಂಗ್ರೆಸ್ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ನ್ಯಾಯಾಲಯದಲ್ಲಿ ಮೀಸಲಾತಿ ವಿಚಾರವಾಗಿ ಸರ್ಕಾರದ ಆದೇಶ ಜಾರಿ ಕಷ್ಟ ಎಂಬುದು ಅಭಿಪ್ರಾಯ ವ್ಯಕ್ತವಾಗಿದೆ” ಎಂದಿದ್ದಾರೆ.

“ಲಿಂಗಾಯತ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಧ್ವಂದ್ವ ನೀತಿ ಅನುಸರಿಸುತ್ತಿದೆ. ನಮ್ಮದು ಒಂದೇ ನೀತಿ ಅದು ಸಾಮೂಹಿಕ ನಾಯಕತ್ವದ ನೀತಿ. ಇದೇ ನಮ್ಮ ಬದ್ಧತೆ” ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ಶಿವಕುಮಾರ್ ಅವರ ಹಿಂದೆ ಬಿದ್ದಿದ್ದಾರಾ ಎಂಬ ಪ್ರಶ್ನೆಗೆ, “ರಾಜಕೀಯದಲ್ಲಿ ಇದೆಲ್ಲ ಸಹಜ. ಎಲ್ಲರನ್ನು ನಿಭಾಯಿಸಿಕೊಂಡು ಹೋಗಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...