- ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ
- ತಪ್ಪು ಸುದ್ದಿ ಹರಡುವವರ ಬಗ್ಗೆ ಅಗತ್ಯ ಕ್ರಮ
ನಾವಿನ್ನೂ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ವಿಚಾರದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಪ್ ಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಇನ್ನು ತಪ್ಪು ಮಾಹಿತಿ ಹೊಂದಿರುವ ಪಟ್ಟಿ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಇದು ವಿಪಕ್ಷ ಕಾಂಗ್ರೆಸ್‌ನ ಕೈವಾಡ ಎಂದು ಜರಿದಿದೆ.
ಈ ಸುದ್ದಿ ಓದಿದ್ದೀರಾ? :ಪಕ್ಷಾಂತರಿಗಳು ಹಾಗೂ ಬಂಡಾಯ ಅಭ್ಯರ್ಥಿಗಳಿಂದ ಬಿಜೆಪಿಗೆ ನಷ್ಟವಿಲ್ಲ: ಸಿಎಂ ಬೊಮ್ಮಾಯಿ