ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

Date:

Advertisements
  • ‘ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು’
  • ‘ರಾಜ್ಯದ 316 ನಗರಗಳಿಗೆ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ’

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ. ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾರತವೂ ಸುಸ್ಥಿರ ಬೆಳವಣಿಗೆ ಕಾಣಬೇಕು. ರಾಜ್ಯದ 316 ನಗರಗಳಿಗೆ ಅಗತ್ಯ ಎಲ್ಲ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಮುನಿಸಿಪಾಲಿಕಾ-2023” 17 ನೇ ಅಂತಾರಾಷ್ಟ್ರೀಯ ಸಮ್ಮೇಳನ‌ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

“ರಾಜ್ಯದಲ್ಲಿ ಶೇ. 38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ‌ ನೆಲೆಸಿದ್ದಾರೆ. ಇವರೆಲ್ಲರಿಗೂ ಟ್ರಾಫಿಕ್ ಕಿರಿಕಿರಿ ಇಲ್ಲದ, ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ‌ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ” ಎಂದರು.

Advertisements

“ನಾವು ನಗರ ಪ್ರದೇಶದ ಕುಡಿಯುವ ನೀರಿಗೆ 9 ಸಾವಿರ ಕೋಟಿ ಕೊಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನ‌ಮಟ್ಟ ಇನ್ನಷ್ಟು ಸುಗಮಗೊಳಿಸಲು ಅಗತ್ಯ ಇರುವ ಎಲ್ಲಾ ವಲಯಗಳಿಗೂ ಸರ್ಕಾರ ಅಗತ್ಯ ಅನುದಾನ ಒದಗಿಸುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

“ಈ ಬಾರಿ ನಾವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದ್ದೇವೆ. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಾಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ” ಎಂದು ವಿವರಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ತಮ್ಮಯ್ಯ, ಎಂಎಲ್ಸಿ ಎಸ್ ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘರ್ ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಕಮಿಷನರ್ ಜಯರಾಮ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X