ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಕಮಲಾ ಹಂಪನಾ ಅಂತಿಮ ದರ್ಶನ ಪಡೆದ ಸಿಎಂ

Date:

Advertisements

“ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ” ಎಂದರು.

Advertisements

ಇದನ್ನು ಓದಿದ್ದೀರಾ? ಖ್ಯಾತ ಸಾಹಿತಿ ಡಾ. ಕಮಲ ಹಂಪನಾ ನಿಧನ: ಗಣ್ಯರ ಕಂಬನಿ

“ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಮತ್ತಿತರರು ಜೊತೆಗಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X