ಪಕ್ಷ ನಂಬಿ ಬಂದವರವನ್ನೆಂದೂ ನಾವು ಕೈ ಬಿಡಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

Date:

  • ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿಯಾದ ಡಿಕೆಶಿ
  • ಲಕ್ಷ್ಮಣ ಸವದಿ ಜೊತೆಗೂ ಚರ್ಚೆ ನಡೆಸಿದ ಕೆಪಿಸಿಸಿ ಅಧ್ಯಕ್ಷ

ಕಾಂಗ್ರೆಸ್ ನಂಬಿ ಬಂದವರನ್ನು ಎಂದಿಗೂ ನಾವು ಕೈ ಬಿಡಲ್ಲ. ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ವಿಚಾರಕ್ಕೂ ಅನ್ವಯಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಇಂದು ಮುಂಜಾನೆ ಹುಬ್ಬಳ್ಳಿಯಲ್ಲಿನ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರಿಬ್ಬರ ಜೊತೆಗೆ ಇದ್ದೇವೆ, ಇಡೀ ಪಕ್ಷವೂ ಅವರ ಜೊತೆ ಇದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು ಹೇಳಿದರು.

ಧೈರ್ಯ ಮಾಡಿ ಯಾರು ನಮ್ಮ ಜೊತೆ ಕೈ ಜೋಡಿಸಿದ್ದಾರೋ ಅವರುಗಳನ್ನು ಕೈ ಬಿಡುವ ಪ್ರಶ್ನೆ ಬರಲ್ಲ, ಸೋತರೂ ಗೆದ್ದರೂ ಅವರು ನಮ್ಮ ನಾಯಕರು ಎಂದು ಡಿಕೆಶಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?:ತಡರಾತ್ರಿ ಲಕ್ಷ್ಮಣ ಸವದಿ ಭೇಟಿ ಮಾಡಿದ ಡಿಸಿಎಂ; ಕುತೂಹಲ ಕೆರಳಿಸಿದ ಬೆಳವಣಿಗೆ

ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್, ಡಿಕೆಶಿ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಶಿವಕುಮಾರ್ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಇನ್ನು ಶಿವಕುಮಾರ್ ಅವರು ಶೆಟ್ಟರ್ ಜೊತೆ ನಡೆಸಿರುವ ಗೌಪ್ಯ ಸಭೆಯಲ್ಲಿ ಇಬ್ಬರೂ ನಾಯಕರುಗಳಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಸಭೆ ನಡೆಸಿರುವುದಾಗಿ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

2029ರ ಲೋಕಸಭಾ ಚುನಾವಣೆ: ಸೋಲಲು ಸಿದ್ಧವಿರುವಂತೆ ರಾಹುಲ್‌ಗೆ ಅಮಿತ್ ಶಾ ಸವಾಲು

ವಿಪಕ್ಷಗಳ ಇಂಡಿಯಾ ಒಕ್ಕೂಟ ನಡೆಸಿದ ಬೃಹತ್ ರ‍್ಯಾಲಿಯ ಮಾರನೇ ದಿನವೇ, ಕೇಂದ್ರ...

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಾದ ಸೌರವ್, ರಾಂಕಾ, ಅಜಿಂಕ್ಯಗೆ 5 ದಿನ ನ್ಯಾಯಾಂಗ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸಲು...