ನ್ಯಾಷನಲ್ ಹೆರಾಲ್ಡ್‌ಗೆ ನಾವು ದುಡಿದ ಆಸ್ತಿಯಿಂದ ಹಣ ಕೊಟ್ಟಿದ್ದೇವೆ: ಡಿ ಕೆ ಶಿವಕುಮಾರ್

Date:

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿ ಕೆ ಸುರೇಶ್, ಡಿ ಕೆ ಶಿವಕುಮಾರ್ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಹೆಸರು ಕೇಳಿ ಬಂದಿರುವ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

- Advertisement -

ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ” ನ್ಯಾಷನಲ್ ಹೆರಾಲ್ಡ್ ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ‌. ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ. ‌ನಮ್ಮ ಟ್ರಸ್ಟ್‌ ನಿಂದಲೂ ದೇಣಿಗೆ ನೀಡಿದ್ದೇವೆ. ನಾವು ದುಡಿದಂತಹ ಆಸ್ತಿಯಿಂದ ರಾಜಾರೋಷವಾಗಿ ಹಣ ನೀಡಿದ್ದೇವೆ. ನಾವು ಕದ್ದುಮುಚ್ಚಿ ಹಣ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಒಬ್ಬ ಮೆಂಟಲ್ ಅವರ ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು. ತಲೆ ಕೆಟ್ಟು ಹೋಗಿದೆ” ಎಂದು ವಾಗ್ದಾಳಿ ನಡೆಸಿದರು.

ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಕುರಿತು ಕೇಳಿದಾಗ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ‘ಬಲಿಷ್ಠರು’ ಬೆತ್ತಲಾಗುವ ಕಾಲ

“ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ ಎಂದು ಕರೆದರು‌. ಗುಲ್ಬರ್ಗಾವನ್ನು ಕಲಬುರ್ಗಿ ಎಂದು ಮರುನಾಮಕರಣ ಮಾಡಲಾಗಿದೆ. ನಮಗೂ ನಮ್ಮದೇ ಆದಂತಹ ಆಸೆ ಇರುತ್ತದೆ. ಅವರಿಗೆ ಏನು ತೊಂದರೆಯಾಗಿದೆ?” ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಹೌದು, ನಮ್ಮ ಹಳ್ಳಿಯ ಜನ ಉದ್ದಾರವಾಗಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು. ನಮ್ಮ ಜನರ ಆಸ್ತಿ ಮೌಲ್ಯ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ಹೊರಗಡೆ ದೇಶದಿಂದ ಜನರು ಬಂದು ಬಂಡವಾಳ ಹೂಡಿಕೆ ಮಾಡಬೇಕು. ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಆಸೆ’ ಎಂದರು.

“ಸಂಸತ್ ಕ್ಷೇತ್ರವನ್ನು ಮೊದಲು ಕನಕಪುರ ಎಂದು ಕರೆಯಲಾಗುತ್ತಿತ್ತು. ಅದನ್ನು ಬೆಂಗಳೂರು ಗ್ರಾಮಾಂತರ ಎಂದು ಆನಂತರ ಏಕೆ ಮಾಡಿದರು? ರಾಮನಗರದ ಹೆಸರು ಬದಲಾವಣೆ ಮಾಡುತ್ತಿಲ್ಲ. ಜತೆಗೆ ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ನಾವು ಕೇವಲ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...