ಬಹುತ್ವದ ಪರವಾಗಿ ಇರುವವರನ್ನು ನಾವು ಸದಾ ಸ್ಮರಿಸುತ್ತಿರಬೇಕು: ಸಿಎಂ ಸಿದ್ದರಾಮಯ್ಯ

Date:

“ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ” ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಸ್ವಾತಂತ್ರ ಸೇನಾನಿ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಾಧವಾನಂದ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ ಬಳಿಕ ಕಳಸಾರೋಹಣದಲ್ಲಿ ಪಾಲ್ಗೊಂಡು ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಾಧವಾನಂದ ಸ್ವಾಮಿಗಳು ಬಹುತ್ವದ ಪರವಾಗಿದ್ದರು. ಈ ಕಾರಣಕ್ಕೆ ಬಹುತ್ವದ ಪರವಾಗಿ ಇರುವವರನ್ನು ನಾವು ಸದಾ ಸ್ಮರಿಸುತ್ತಿರಬೇಕು. ಪಾಳೇಗಾರಿಕೆ ಸಮಾಜಕ್ಕೆ, ಜನರ ಸ್ವಾತಂತ್ರ್ಯಕ್ಕೆ ಕಂಟಕ. ಹೀಗಾಗಿ ಬಲಾಢ್ಯರ ಕೈಯಲ್ಲಿ ಅಧಿಕಾರ ಇರಬಾರದು ಎಂದು ಮಹಾತ್ಮಗಾಂಧಿಯವರು ಹೇಳಿದ್ದರು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ವಾತಂತ್ರ ಸೇನಾನಿಗಳಾದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಭಾರತದೊಳಗಿದ್ದ ವರ್ಣ ವ್ಯವಸ್ಥೆ ಮತ್ತು ಜಾತಿ ವ್ಯವಸ್ಥೆ ಹಾಗೂ ಭಾರತದಲ್ಲಿನ 560 ಸಂಸ್ಥಾನಗಳಲ್ಲಿ ಇದ್ದ ಒಳ ಮುನಿಸನ್ನು ಬ್ರಿಟೀಷರು ಬಳಸಿಕೊಂಡು ಭಾರತವನ್ನು ಆಳಿದರು. ಜಾತಿ ವ್ಯವಸ್ಥೆ ಕಾರಣಕ್ಕೆ ಭಾರತದ ಶೂದ್ರರು ಕೇವಲ ಉತ್ಪಾದನೆ ಮಾಡಬೇಕಿತ್ತು. ಆದರೆ ತಾವು ಉತ್ಪಾದಿಸಿದ್ದನ್ನು ಅನುಭವಿಸುವ ಹಕ್ಕು ಮತ್ತು ಸ್ವಾತಂತ್ರ್ಯ ಇರಲಿಲ್ಲ. ಈ ಅಸಮಾನತೆ ವಿರುದ್ಧ ಶ್ರೀ ಮಾಧವಾನಂದ ಸ್ವಾಮೀಜಿಯವರು ಧ್ವನಿ ಎತ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಜನರ ಮುಕ್ತಿಗಾಗಿ ಶ್ರಮಿಸಿದರು” ಎಂದು ಮೆಚ್ಚುಗೆ ಸೂಚಿಸಿದರು.

“ಬಸವಾದಿ ಶರಣರು 12ನೇ ಶತಮಾನದಲ್ಲಿ ಹೇಳಿದ್ದನ್ನು ಮಾಧವಾನಂದ ಪ್ರಭುಗಳು 20 ನೇ ಶತಮಾನದಲ್ಲಿ ಸಾರಿದರು” ಎಂದು ವಿವರಿಸಿದರು.

ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರು, ಮ.ನಿ.ಪ್ರ ಡಾ.ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತಮಠ, ಶೇಗುಣಶಿ. ಅವಧೂತ ಸಿದ್ದ ಮಹಾರಾಜ್ , ಅರಕೇರಿ ಗುಡ್ಡ, ಸೋಮಲಿಂಗೇಶ್ವರ ಸ್ವಾಮಿಗಳು, ಮಖಣಾಪುರ, ಸಂಗನಬಸವೇಶ್ವರ ಸ್ವಾಮೀಜಿ, ಬಸವನಬಾಗೇವಾಡಿ ಇವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಆರೋಗ್ಯ ಇಲಾಖೆ | 8 ವರ್ಷಗಳ ಬಳಿಕ ಕೌನ್ಸಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಸಚಿವ ಗುಂಡೂರಾವ್

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಚಡವಣ ತಾಲೂಕಿನ ಇಂಚಗೇರಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ, ರಾಣಿ ಚನ್ನಮ್ಮ ಅವರ ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಿ ಪುಷ್ಪಾರ್ಚನೆ ಮಾಡಿದ ಬಳಿಕ ಸ್ವಾತಂತ್ರ್ಯ ಸೇನಾನಿ ಹಾಗೂ ನಿಜರಾಜಯೋಗಿ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಮಾಧವಾನಂದ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...

ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ...

ಬಾಲ್ಯ ವಿವಾಹ | ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಳವಳ

ಬಾಲ್ಯ ವಿವಾಹ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ದುರದೃಷ್ಟಕರ...