ಯಾರ ಮುಂದೆಯೂ ತಲೆಬಾಗದೆ ಇರುವುದನ್ನು ಇರಾನ್‌ನಿಂದ ಕಲಿಯಬೇಕು: ಸಂಜಯ್ ರಾವತ್

Date:

ಸ್ವಾಭಿಮಾನ ಮತ್ತು ಧೈರ್ಯ ಎಂದರೆ ಏನು ಎಂಬುದನ್ನು ಇರಾನ್ ತೋರಿಸಿದೆ. ಯಾರ ಮುಂದೆಯೂ ತಲೆಬಾರದೆ ಇರುವುದನ್ನು ಭಾರತವು ಇರಾನ್‌ನಿಂದ ಕಲಿಯಬೇಕು ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

- Advertisement -

ಅಮೆರಿಕ ದಾಳಿಗೆ ಪ್ರತ್ಯುತ್ತರವಾಗಿ ಸೋಮವಾರ ರಾತ್ರಿ ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಇರಾನ್ ದಾಳಿ ಮಾಡಿತು. ಟ್ರಂಪ್ ಏಕಪಕ್ಷೀಯವಾಗಿ ಕದನ ವಿರಾಮ ಘೋಷಿಸಿದ್ದನ್ನು ಅಲ್ಲಗಳೆದು, ಇಸ್ರೇಲ್ ಮೇಲೆ ದಾಳಿ ಮಾಡಿ ಬಳಿಕ ಇರಾನ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿತು. ಇದೆಲ್ಲದರ ಬೆನ್ನಲ್ಲೇ, ಇರಾನ್ ಬಗ್ಗೆ ಸಂಜಯ್ ರಾವತ್ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಾಶ್ಮೀರ ಸಮಸ್ಯೆಯಾಗಲಿ ಅಥವಾ ಪಾಕಿಸ್ತಾನದೊಂದಿಗಿನ ಸಂಘರ್ಷವಾಗಲಿ, ಇರಾನ್ ಯಾವಾಗಲೂ ಭಾರತದ ಪರವಾಗಿ ನಿಂತಿದೆ. ನಾವು ಯಾವುದೇ ತೊಂದರೆಯನ್ನು ಎದುರಿಸಿದಾಗ ಇರಾನ್ ಯಾವಾಗಲೂ ಭಾರತದ ಪರವಾಗಿ ನಿಂತ ದೇಶ. ಆ ದೇಶವು ಯಾರ ಮುಂದೆಯೂ ತಲೆಬಾಗಿಲ್ಲ. ನಾವು ಇರಾನ್‌ನಿಂದ ಕಲಿಯಬೇಕು” ಎಂದು ರಾವತ್ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ | ಭಾರತದ ಬಾಸ್ಮತಿ ಬೆಳೆವ ರೈತರು-ರಫ್ತುದಾರರಿಗೆ ಸಂಕಷ್ಟ

ಸದ್ಯ, ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದಾಗ್ಯೂ, ಮಧ್ಯಪ್ರಾಚ್ಯ ರಾಷ್ಟ್ರಗಳು ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ. ಪರಿಣಾಮ, ಮಧ್ಯಪ್ರಾಚ್ಯ ರಾಷ್ಟ್ರಗಳು ಮತ್ತು ಭಾರತದ ನಡುವೆ ಹಾರಾಟ ನಡೆಸಬೇಕಿದ್ದ 48 ವಿಮಾನಗಳು ರದ್ದಾಗಿವೆ. ಏತನ್ಮಧ್ಯೆ, ಮಂಗಳವಾರ, ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಶಾದ್‌ನಿಂದ ನವದೆಹಲಿಗೆ ಬಂದ ವಿಶೇಷ ವಿಮಾನದಲ್ಲಿ ಒಟ್ಟು 292 ಭಾರತೀಯ ಪ್ರಜೆಗಳು ಇರಾನ್‌ನಿಂದ ಭಾರತಕ್ಕೆ ಮರಳಿದ್ದಾರೆ.

ಈವರೆಗೆ, ಇರಾನ್‌ನಿಂದ 2,295 ಭಾರತೀಯರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...