ಸುಳ್ಳಿನ ಕಾರ್ಖಾನೆ ಪಕ್ಷ ಬಿಜೆಪಿಗೆ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸುತ್ತೇವೆ: ಸಿ ಎಂ ಸಿದ್ದರಾಮಯ್ಯ

Date:

Advertisements

ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ? ನೀವೇ ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅರಸೀಕೆರೆ ತಾಲ್ಲೂಕಿನ 152 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ, ನಾನಾ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ‌ ನೆರವೇರಿಸಿ ಮಾತನಾಡಿದರು.

“ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಕೂಡಿಕೊಂಡಿಕೊಂಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾಗಿ ವಿಧಾನ ಪರಿಷತ್ ಗೆ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ನಮ್ಮ ಜನ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಭರ್ಜರಿಯಾಗಿ ಗೆಲ್ಲಿಸಿದರು. ಬರಲಿರುವ ಲೋಕಸಭಾ ಚುನಾವಣೆಯಲ್ಲೂ ಅವರು ದೋಸ್ತಿಗೆ ಇದೇ ಗತಿ ಆಗಲಿದೆ” ಎಂದು ಭವಿಷ್ಯ ನುಡಿದರು.

Advertisements

“ಶಾಸಕ ಶಿವಲಿಂಗೇಗೌಡರು ತಮ್ಮ ಕೆಲಸ ಕಾರ್ಯಗಳಿಂದ ನಿರಂತರವಾಗಿ ಗೆಲ್ಲುತ್ತಾರೆ. ನಾನು ಹಲವು ವರ್ಷಗಳಿಂದ ಶಾಸಕ ಶಿವಲಿಂಗೇಗೌಡರ ಕೆಲಸಗಳನ್ನು ನೋಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಜತೆಗೆ ರಾಜ್ಯದ ಅಭಿವೃದ್ಧಿ ಬಗ್ಗೆ ವಿಧಾನಸಭೆಯಲ್ಲಿ ಸಮರ್ಥವಾಗಿ ವಾದ ಮಂಡಿಸುತ್ತಾರೆ. ಹೀಗಾಗಿ ಶಿವಲಿಂಗೇಗೌಡರು ಶಾಶ್ವತವಾಗಿ ವಿಧಾನಸಭೆಗೆ ಆರಿಸಿ ಬರಬೇಕು” ಎಂದರು.

“ಎತ್ತಿನಹೊಳೆ ಯೋಜನೆ ಪರವಾಗಿ ಶಿವಲಿಂಗೇಗೌಡರು ನಿರಂತರವಾಗಿ ಹೋರಾಡುತ್ತಿದ್ದಾರೆ. ನಾವು ಮಾತ್ರ ಮಣ್ಣಿನ ಮಕ್ಕಳು ಎನ್ನುವವರು ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿದ್ದರು. ಯಾರೇ ವಿರೋಧ ಮಾಡಿದರೂ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಯೋಜನೆಯಿಂದ ಕ್ಷೇತ್ರಕ್ಕೆ ನೀರು ಕೊಡುವುದು ಗ್ಯಾರಂಟಿ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದೇಶದ ಸಾಲ ಎಷ್ಟಿದೆ ಅಂತ ಪ್ರಲ್ಹಾದ್ ಜೋಶಿ ಆದಿಯಾಗಿ ಬಿಜೆಪಿಯವರೇ ಜನರಿಗೆ ತಿಳಿಸಲಿ: ಸಚಿವ ಸಂತೋಷ್ ಲಾಡ್

“ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡ್ತೀವಿ ಎಂದು, ಇದಕ್ಕಾಗಿ 5300 ಕೋಟಿ ಕೊಡ್ತೀವಿ ಎಂದು ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ನಲ್ಲಿ ಮತ್ತು ಬೊಮ್ಮಾಯಿ ಅವರು ರಾಜ್ಯ ಬಜೆಟ್ನಲ್ಲಿ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿಯನ್ನೂ ಕೊಡದೆ ರಾಜ್ಯಕ್ಕೆ ವಂಚಿಸಿದರು” ಎಂದು ಕಿಡಿಕಾರಿದರು.

“ಒಂದು ಕಡೆ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಬಿಜೆಪಿಯವರು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರು ಬದಲಾಯಿಸಿದ್ದಾರೆ” ಎಂದು ಟೀಕಿಸಿದರು.

“ಬಾಣಾವರದ ಎರಡೂ ಪಂಚಾಯ್ತಿಗಳನ್ನು ಒಟ್ಟಾಗಿಸಿ ಪಟ್ಟಣ ಪಂಚಾಯ್ತಿ ಮಾಡಿಕೊಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು

ಬಾಣಾವರಕ್ಕೆ ಆಗಮಿಸಿ ಕನಕ ಭವನ‌ ಉದ್ಘಾಟಿಸಿದ ಬಳಿಕ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ‌ ಕೆ.ಎನ್.ರಾಜಣ್ಣ, ಇಂಧನ ಸಚಿವ ಕೆ.ಜೆ.ಜಾರ್ಜ್, ಕಡೂರು ಶಾಸಕ ಆನಂದ್ ಸೇರಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಗೋಪಾಲಸ್ವಾಮಿ, ಅರಕಲಗೋಡು ಪ್ರಸನ್ನ ಸೇರಿ ಹಲವು ಮಂದಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X