ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿರುವ ಬಗ್ಗೆ ಮಾತನಾಡಿದ ಸಿಎಂ, “ದೂರು ನೀಡಿರುವವರು ಯಾರು? ಸರ್ಕಾರವೇ? ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದರ್ಶನ್ ಪ್ರಕರಣ : ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ

ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, “ಅದು ಕೇವಲ ಸುದ್ದಿ. ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ” ಎಂದರು.

“ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ” ಎಂದರು.

ಚಿತ್ರನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಪೋಲೀಸ್ ಅಧಿಕಾರಿಗಳು ಸಿನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ” ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ: ನಿರೀಕ್ಷೆಯಂತೆ ಆಗಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, “ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೋಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಗಾರು ಅಧಿವೇಶನ | ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್‌ ಹುದ್ದೆ ಭರ್ತಿ: ಸಚಿವ ಕೃಷ್ಣ ಬೈರೇಗೌಡ

ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ....

ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ...

ಮುಂಗಾರು ಅಧಿವೇಶನ ಆರಂಭ, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ; ಸಿಎಂ ತಿರುಗೇಟು

ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿ...