ಸಿದ್ದೇಶ್ವರ ಶ್ರೀಗಳ ಪರಿಸರ-ಪ್ರಕೃತಿಯ ಹೆಗ್ಗುರುತಾಗಿ ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ: ಎಂ ಬಿ ಪಾಟೀಲ್

Date:

Advertisements

ಸಿದ್ದೇಶ್ವರ ಶ್ರೀಗಳ ಪರಿಸರ-ಪ್ರಕೃತಿ ಪ್ರೀತಿಯ ಹೆಗ್ಗುರುತಾಗಿ ಅವರ ನೆನಪಿನಲ್ಲಿ ವಿಜಯಪುರ, ಮಮದಾಪುರ ಅಥವಾ ಬಾಬಾನಗರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ಬೆಳಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅಲ್ಲಿಯೇ ವಿಜ್ಞಾನ ಸಂಶೋಧನಾ ಕೇಂದ್ರ ಆರಂಭಿಸುವ ಉದ್ದೇಶ ಇದೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ವಿಜಯಪುರ ಜಿಲ್ಲಾಡಳಿತದಿಂದ ಇಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಮ್ಮ ಗಣತಂತ್ರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಾನ ಅವಕಾಶಗಳನ್ನು ಲಭ್ಯವಾಗಿಸುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಕೈಗಾರಿಕೆ, ಕೃಷಿ ಆಧಾರಿತ ಉದ್ದಿಮೆ, ಪ್ರವಾಸೋದ್ಯಮ ಒಳಗೊಂಡಂತೆ ಸಮಗ್ರ ಅಭಿವೃದ್ಧಿಗೆ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಶುಕ್ರವಾರ ಹೇಳಿದರು.

“ಇಲ್ಲಿನ ಪಾರಂಪರಿಕ ಸ್ಥಳಗಳ ಮಹತ್ವ ಗಮನದಲ್ಲಿರಿಸಿಕೊಂಡು ಜಿಲ್ಲೆಯನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು. ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ತೆಲಂಗಾಣ ಮಾದರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ/ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು” ಎಂದರು.

Advertisements

“ಐತಿಹಾಸಿಕ ಕೋಟೆ ಗೋಡೆಗಳು ಹಾಗೂ ಸುತ್ತಲಿನ ಸ್ಥಳಗಳ ಅಭಿವೃದ್ಧಿಪಡಿಸುವ ಜೊತೆಗೆ ಕಾರ್ಯಾರಂಭವಾಗಲಿರುವ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಲಭ್ಯವಾಗಿಸುವ ಬಗ್ಗೆ ಕ್ರಮ ವಹಿಸಲಾಗುವುದು” ಎಂದು ವಿವರಿಸಿದರು.

“ನಗರ ಸಂಚಾರ ದಟ್ಟಣೆ ತಪ್ಪಿಸಲು ಗಾಂಧಿ ಚೌಕಿಯಲ್ಲಿ ಪ್ರೈ ಓವರ್ ನಿರ್ಮಾಣ, ಸೈಕ್ಲಿಂಗ್ ವೆಲೋಡೋಮ್ ಹಾಗೂ ಸೈಕ್ಲಿಂಗ್ ಹಾಸ್ಟೇಲ್ ಉನ್ನತೀಕರಣ. ಜಿಲ್ಲಾ ಕೇಂದ್ರದಲ್ಲಿ ವಿಮಾನಯಾನ ತರಬೇತಿ ಸಂಸ್ಥೆ ಪ್ರಾರಂಭಿಸಲು ಯೋಜನೆ ಕಾರ್ಯಗತಗೊಳಿಸಲು ಗಮನ ಕೇಂದ್ರೀಕರಿಸಲಾಗುತ್ತದೆ” ಎಂದು ತಿಳಿಸಿದರು.

“ಸಾರ್ವಜನಿಕ ಶಾಲಾ ಶಿಕ್ಷಣ ಗುಣಮಟ್ಟ ಹೆಚ್ಚಿಸುವುದು, ಖಾಸಗಿ ಸಹಯೋಗದಲ್ಲಿ ಉತ್ಕೃಷ್ಟ ದರ್ಜೆಯ ಬಿಸಿಯೂಟ ಒದಗಿಸುವುದು. ವಿಜಯಪುರ ನಗರ ಹಾಗೂ ಪಟ್ಟಣಗಳಲ್ಲಿ ಅತ್ಯುತ್ತಮ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಆಧುನೀಕರಣ, ಗ್ರಾಮೀಣ ವೈದ್ಯಕೀಯ ಸೇವೆಗೆ ಒತ್ತು. ಆಯುಷ್ ಪದ್ಧತಿ, ನಿಸರ್ಗ ಚಿಕಿತ್ಸೆಗೆ ಪ್ರೋತ್ಸಾಹ ಜನರ ಗುಣಮಟ್ಟದ ಬದುಕಿಗೆ ಒತ್ತಾಸೆಯಾಗುವಂತೆ ಮಾಡಲಾಗುವುದು” ಎಂದು ಪಾಟೀಲ್ ವಿವರಿಸಿದರು.

“ನಗರ ಹಾಗೂ ಪಟ್ಟಣಗಳಲ್ಲಿ ಉಚಿತ ವೈಫೈ ವ್ಯವಸ್ಥೆ, ಕ್ರೀಡೆಗೆ ಉತ್ತೇಜನ,‌ ಸಮುದಾಯ ರೇಡಿಯೋ ಕೇಂದ್ರಗಳ ಸ್ಥಾಪನೆ, ಮೀನುಗಾರಿಕೆ ಕಾಲೇಜು ಹಾಗೂ ಬೃಹತ್ ಮೀನು ಸಂಗ್ರಹಾಲಯ ಪ್ರಾರಂಭ ಆದ್ಯತೆಗಳ ಪಟ್ಟಿಯಲ್ಲಿದೆ” ಎಂದು ಗಮನ ಸೆಳೆದರು.

ಸಂಸದ ರಮೇಶ ಜಿಗಜಿಣಗಿ, ಮೇಯರ್ ಮಹೆಜಬೀನ್ ಹೊರ್ತಿ, ಉಪ ಮೇಯರ್ ದಿನೇಶ್ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ್‌ ಇದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X