ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತೇವೆ: ಛಲವಾದಿ ನಾರಾಯಣಸ್ವಾಮಿ ಪ್ರಚೋದನಕಾರಿ ಹೇಳಿಕೆ

Date:

ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ. ಅವರನ್ನು ಬಿಜೆಪಿ ಕಾರ್ಯಕರ್ತರು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದು, ಬಂಧನಕ್ಕೆ ಆಗ್ರಹಿಸಿ ಪೊಲೀಸ್ ದೂರು ಸಲ್ಲಿಸಿದ್ದಾರೆ.

- Advertisement -

ಎಸ್‌ಐಆರ್‌ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ವಿರೋಧಿಸಿ ನವೆಂಬರ್ 3ರಂದು ಕೋಲಾರದಲ್ಲಿ ಬಿಜೆಪಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆ ಆಯೋಜಿಸಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾರಾಯಣಸ್ವಾಮಿ ಪ್ರಚೋದನಕಾರಿ ಕೇಳಿಕೆ ನೀಡಿದ್ದಾರೆ. “ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ. ಯುವಜನರನ್ನು ದಾರಿತಪ್ಪಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಅವರನ್ನು ಕತ್ತರಿಸಿ, ಸಮುದ್ರಕ್ಕೆ ಎಸೆಯುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ತಮ್ಮ ಹೇಳಿಕೆಗೆ ಸಮಜಾಯಷಿ ನೀಡಿರುವ ನಾರಾಯಣಸ್ವಾಮಿ, “ನಾನು ಯಾವುದೇ ವ್ಯಕ್ತಿಗೆ ಬೆದರಿಕೆ ಹಾಕಿಲ್ಲ. ಕಾಂಗ್ರೆಸ್ ವಿರುದ್ಧ ಮಾತನಾಡಿದ್ದೇನೆಯೇ ಹೊರತು ನಿರ್ದಿಷ್ಟ ನಾಯಕರನ್ನು ಉದ್ದೇಶಿಸಿಲ್ಲ. ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುವುದನ್ನು ಮುಂದುವರಿಸಿದರೆ ಜನರು ಮತ್ತು ಬಿಜೆಪಿ ಕಾರ್ಯಕರ್ತರು ಆ ಪಕ್ಷವನ್ನು ರಾಜಕೀಯವಾಗಿ ನಿರ್ನಾಮ ಮಾಡುತ್ತಾರೆ ಎಂಬ ಅರ್ಥದಲ್ಲಿ ಮಾತನಾಡಿದ್ದೇನೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಅವರ ಸ್ಪಷ್ಟನೆಯನ್ನು ಕಾಂಗ್ರೆಸ್ ನಾಯಕರು ತಳ್ಳಿಹಾಕಿದ್ದು, “ಪ್ರತಿಪಕ್ಷ ನಾಯಕನಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಈ ರೀತಿಯ ಭಾಷೆ ಬಳಸುವುದು ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ನಾರಾಯಣಸ್ವಾಮಿ ಹೇಳಿಕೆ ವಿರುದ್ಧ ಬೆಂಗಳೂರಿನಲ್ಲಿರುವ ಅವರ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವೇಳೆ ಕೆಲವರು ಪೊಲೀಸ್ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದು, 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಾಲ್ ಹರುವೇಗೌಡ ಅವರು ನಾರಾಯಣಸ್ವಾಮಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಅಂದಹಾಗೆ, ಇದೇ ಛಲವಾದಿ ನಾರಾಯಣಸ್ವಾಮಿ 2022ರಲ್ಲಿ ಚಡ್ಡಿ ಬುಟ್ಟಿ ಪ್ರತಿಭಟನೆ ನಡೆಸಿ, ದಲಿತರಿಗೆ ಅವಮಾನಿಸಿದ್ದರು. ಆ ಸಮಯದಲ್ಲಿ, ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಕೇಸರೀಕರಣ ವಿರೋಧಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ಆರ್‌ಎಸ್‌ಎಸ್‌ನ ಖಾಕಿ ಚಡ್ಡಿಗಳನ್ನು ಸುಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು.

ಆಗ ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದ ಛಲವಾದಿ ನಾರಾಯಣಸ್ವಾಮಿ, ಆರ್‌ಎಸ್‌ಎಸ್‌ನ ಹಳೆಯ ಚಡ್ಡಿಗಳನ್ನು ಬುಟ್ಟಿಯಲ್ಲಿ ಹೊತ್ತು ಕಾಂಗ್ರೆಸ್ ಕಚೇರಿ ಮತ್ತು ಸಿದ್ದರಾಮಯ್ಯ ಅವರ ನಿವಾಸಕ್ಕೆ ಕಳಿಸುತ್ತೇವೆಂದು ಪ್ರತಿಭಟನೆ ನಡೆಸಿದ್ದರು. ಆ ಘಟನೆಯನ್ನು ತೀಕ್ಷ್ಣವಾಗಿ ಟೀಕಿಸಿದ್ದ ಸಿದ್ದರಾಮಯ್ಯ, “ಆರೆಸ್ಸೆಸ್‌ನಲ್ಲಿ ದಲಿತರಿಗೆ ಉನ್ನತ ಸ್ಥಾನಮಾನ ನೀಡುವುದಿಲ್ಲ. ಆದರೆ, ಚಡ್ಡಿ ಬುಟ್ಟಿ ಹೊರುವ ಕೆಲಸಕ್ಕೆ ದಲಿತ ನಾಯಕರನ್ನು ಬಳಸಿಕೊಳ್ಳಲಾಗುತ್ತಿದೆ. ಇದು ದಲಿತರನ್ನು ಅವಮಾನಿಸುವ ಧೋರಣೆಯ ಸಂಕೇತ” ಎಂದು ಆರೋಪಿಸಿದ್ದರು.

ಇನ್ನು, ಪ್ರಚೋದನಾಕಾರಿ ಮತ್ತು ದ್ವೇಷಪೂರಿತ ಹೇಳಿಕೆ ನೀಡುವುದು ಬಿಜೆಪಿಗರಿಗೆ ಹಳೆಯ ಚಾಳಿ. 2023ರ ಚುನಾವಣೆ ಸಮಯದಲ್ಲಿ ಮಂಡ್ಯದಲ್ಲಿ ಭಾಷಣ ಮಾಡಿದ್ದ ಡಾ. ಸಿ.ಎನ್. ಅಶ್ವತ್ಥನಾರಾಯಣ, “ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನನಂತೆ ಮುಗಿಸಬೇಕು” ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.

ಈ ಲೇಖನ ಓದಿದ್ದೀರಾ?: ಅಮೆರಿಕ ಮಧ್ಯಂತರ ಚುನಾವಣೆ: ಡೊನಾಲ್ಡ್ ಟ್ರಂಪ್ ಕುರ್ಚಿಗಿಲ್ಲ ಕುತ್ತು; ಬಹುಮತ ಕಳೆದುಕೊಂಡರೆ ಸರ್ಕಾರ ‘ಹಲ್ಲು…

2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಬಿಜೆಪಿ ನಾಯಕ ಅನುರಾಗ್‌ ಠಾಕೂರ್, “ಸಿಎಎ ವಿರೋಧಿ ಪ್ರತಿಭಟನಾಕಾರರು ದೇಶದ್ರೋಹಿಗಳು. ಅವರನ್ನು ಗುಂಡಿಕ್ಕಿ ಕೊಲ್ಲಿ” ಎಂದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದರು. ಅಂದಹಾಗೆ, ಅದೇ ಸಮಯದಲ್ಲಿ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಡೆದಿತ್ತು.

ಅದೇ ದೆಹಲಿ ಚುನಾವಣಾ ಪ್ರಚಾರದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಮತ್ತೊಬ್ಬ ಬಿಜೆಪಿಗ ಪರ್ವೇಶ್‌ ವರ್ಮಾ, “ಮನೆಗಳಿಗೆ ನುಗ್ಗಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬಹುದು, ಜನರನ್ನು ಕೊಲ್ಲಬಹುದು” ಎಂದು ದ್ವೇಷಪೂರಿತ ಹೇಳಿಕೆ ನೀಡಿದ್ದರು.

ಅದಷ್ಟೇ ಯಾಕೆ, 2024ರ ಲೋಕಸಭಾ ಚುನಾವಣೆ ವೇಳೆ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಚಿನ್ನ ಮತ್ತು ಮಂಗಳಸೂತ್ರಗಳನ್ನು ಸಂಗ್ರಹಿಸಿ, ಹೆಚ್ಚು ಮಕ್ಕಳಿರುವವರಿಗೆ ಮತ್ತು ನುಸುಳುಕೋರರಿಗೆ ಹಂಚುತ್ತದೆ” ಎಂದು ದ್ವೇಷ ಭಾಷಣ ಮಾಡಿದ್ದರು.

ಇನ್ನು, ಇತ್ತೀಚೆಗೆ, ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕಾಂಗ್ರೆಸ್ ನಾಯಕರನ್ನು ‘ಈ ನನ್ ಮಕ್ಕಳು’ ಎಂದು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದರು. ಬಳಿಕ, “ಆಕ್ರೋಶದಲ್ಲಿ ಕೆಲವು ಪದಗಳನ್ನು ಬಳಸಿದ್ದೇನೆ. ನನ್ನ ಮಾತುಗಳಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎಂದಿದ್ದರು.

ಇದೀಗ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು, “ನಾರಾಯಣಸ್ವಾಮಿ ಅವರದ್ದು ರಾಜಕೀಯ ನಾಯಕರ ಭಾಷೆಯೋ ಅಥವಾ ಬೀದಿ ರೌಡಿಗಳ ಭಾಷೆಯೋ? ಕಾಂಗ್ರೆಸ್ ಕಾರ್ಯಕರ್ತರು ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ” ಎಂದಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಿಂದ 4,526 ಭಾರತೀಯರ ಗಡೀಪಾರು: ವರ್ಷವೊಂದರಲ್ಲಿ ಸಾರ್ವಕಾಲಿಕ ದಾಖಲೆ ಎಂದ CBSA

ಕೆನಡಾ ಸರ್ಕಾರವು ತನ್ನ ವಲಸೆ ನಿಯಮಗಳನ್ನು ಬಿಗಿಗೊಳಿಸುತ್ತಿದ್ದು, ದೇಶದಲ್ಲಿ ಕಾನೂನುಬಾಹಿರವಾಗಿ ನೆಲೆಸಿದ್ದವರ...

ಔರಾದ್ | ರಾಷ್ಟ್ರೀಯ ಬಸವದಳದ ಅಧ್ಯಕ್ಷರಾಗಿ ಶರಣಪ್ಪ ನಾಗಲಗಿದ್ದೆ ಆಯ್ಕೆ

ಔರಾದ್ ತಾಲೂಕಿನ ರಾಷ್ಟ್ರೀಯ ಬಸವದಳದ ಅಧ್ಯಕ್ಷರಾಗಿ ಶೆಂಬೆಳ್ಳಿ ಗ್ರಾಮದ ಶರಣಪ್ಪ ನಾಗಲಗಿದ್ದೆ...

KPSC ಅಕ್ರಮ | 35 ಕೋಟಿ ರೂ. ವೆಚ್ಚದ ‘ಡ್ರೀಮ್ ಪ್ರಾಜೆಕ್ಟ್’ ನಿರ್ಮಿಸಲು ಬಂಧಿತ ಸಾಹುಕಾರ್ ಸಂಚು: ಇಡಿ ಸ್ಫೋಟಕ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ...