ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕಿ ಸೋನಿಯಾ ಗಾಂಧಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.
“ರಾಮ ಮಂದಿರದ ಉದ್ಘಾಟನೆಗೆ ಸೋನಿಯಾ ಗಾಂಧಿ ಮತ್ತು ಖರ್ಗೆ ಅವರನ್ನು ಆಹ್ವಾನಿಸಲಾಗಿದೆ. ಅವರು ಭಾಗಿಯಾಗುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು,” ಎಂದು ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
“ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ಮಹಾಮಸ್ತಕಾಭಿಷೇಕ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.