ಬಾಬರಿ ಮಸೀದಿಯಂತೆಯೇ ಭಟ್ಕಳದ ಪಳ್ಳಿಯನ್ನೂ ಒಡೆಯುತ್ತೇವೆ: ಬಿಜೆಪಿ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

Date:

ಕಳೆದ ಹಲವಾರು ದಿನಗಳಿಂದ ಸುದ್ದಿಯಲ್ಲಿರದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಮತ್ತೆ ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಲ್ಲಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ನಾಮ ಆದಂತೆಯೇ ಭಟ್ಕಳದಲ್ಲಿರುವ ಚಿನ್ನದ ಪಳ್ಳಿಯೂ ಆಗಲಿದೆ. ಇದನ್ನು ಬೇಕಾದರೆ ಬೆದರಿಕೆ ಎಂದು ಬೇಕಾದರೂ ತಿಳಿಯಿರಿ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಬಾಬರಿ ಮಸೀದಿ ನಿರ್ನಾಮ ಮಾಡಿದಂತೆಯೇ ಭಟ್ಕಳದಲ್ಲಿರುವ ಚಿನ್ನದ ಪಳ್ಳಿಯನ್ನೂ ಕೂಡ ಅದೇ ರೀತಿ ಮಾಡುವುದು ಖಂಡಿತ. ಇದು ಹಿಂದೂ ಸಮಾಜದ ತೀರ್ಮಾನ. ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಶಿರಸಿಯ ಸಿಪಿ ಬಜಾರ್​​ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ಥಾನದ ಕುರುಹು ಇದೆ” ಎಂದು ಅವರು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರೊಂದಿಗೆ ಅನಂತಕುಮಾರ್ ಹೆಗಡೆ

“ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕುವ ತನಕ ಈ ಹಿಂದೂ ಸಮಾಜ ಸುಮ್ಮನಿರಲ್ಲ. ಈಗ ರಣಭೈರವ ಎದ್ದಾಗಿದೆ. ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ದರೆ, ಇದು ಹಿಂದೂ ರಕ್ತವೇ ಅಲ್ಲ. ಹಿಂದೂ ಧರ್ಮ ಋಣ ಇಟ್ಟಿಕೊಳ್ಳುವ ಧರ್ಮ ಅಲ್ಲವೇ ಅಲ್ಲ. ಜಾತಿಯ ಹೆಸರಿನಲ್ಲಿ ಹಿಂದೂ ಸಮಾಜ ಒಡೆದರು. ಇಂದಿಗೂ ಮೂರ್ಖ ಸಿದ್ದರಾಮಯ್ಯನಂತವರು ಹಿಂದೂ ಸಮಾಜ ಒಡೆಯುತ್ತಿದ್ದಾರೆ” ಎಂದು ಸಿಎಂ ಅವರನ್ನು ಏಕವಚನದಲ್ಲೇ ಟೀಕಿಸಿದ್ದಾರೆ.

“ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲವೇ ಅಲ್ಲ. ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು ನಮ್ಮ ವಿರೋಧಿಗಳು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿಎಂ ಸಿದ್ದರಾಮಯ್ಯ ನಮ್ಮ ವಿರೋಧಿ. ಅಲ್ಪಸಂಖ್ಯಾತರ ಓಟಿಗೆ ಹರಾಜಾಗಿ ಹೋದವರು ನಮ್ಮ ವಿರೋಧಿಗಳು. ಅಹಿಂದ ಮಾನಸಿಕತೆಗೆ ನಮ್ಮ ವಿರೋಧ. ಅಹಿಂದ ಎಂಬುವುದು ಗತಿಗೆಟ್ಟ ಮಾನಸಿಕತೆ. ಅದಕ್ಕೆ ನಮ್ಮ ವಿರೋಧ” ಸಂಸದ ಅನಂತ ಕುಮಾರ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಇಂಡಿಯಾ’ ಮೈತ್ರಿಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, “ನೀನು ಬಾ, ಇಲ್ಲ ಬಿಡು. ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ” ಎಂದು ನಿಂದಿಸಿದ್ದಾರೆ.

“ನಾನು ಅಯೋಧ್ಯೆಗೆ ಹೋಗುತ್ತೇನೆ. ಆದರೆ 22ಕ್ಕೆ ಹೋಗಲ್ಲ. ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ಧಮ್ಮು” ಎಂದು ಹೆಗಡೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ವಿವಾದವನ್ನು ಎಬ್ಬಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದು ನಡೆಯಲಿದೆ ಹೈ ಪ್ರೊಫೈಲ್‌ ಕೇಸುಗಳ ವಿಚಾರಣೆ; ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ನಾಲ್ಕು ಹೈಪ್ರೊಫೈಲ್‌ ಕೇಸುಗಳ ವಿಚಾರಣೆ ಹೈಕೋರ್ಟ್‌ ಸೇರಿದಂತೆ ವಿವಿಧ ಕೋರ್ಟ್‌ಗಳಲ್ಲಿ...

ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ...

ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ...

ಆರ್ ಅಶೋಕ್‌ಗೆ ನಮ್ಮ ಪಕ್ಷದ ಉಸಾಬರಿ ಯಾಕೆ: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್‌ ಅವರಿಗೆ ನಮ್ಮ ಪಕ್ಷದ...