ನ.22ಕ್ಕೂ ಮುನ್ನ ಬಿಹಾರದಲ್ಲಿ ಹೊಸ ಸರ್ಕಾರ ರಚನೆ: ಚಿರಾಗ್ ಪಾಸ್ವಾನ್

Date:

ಬಿಹಾರದಲ್ಲಿ ನವೆಂಬರ್ 22ಕ್ಕೂ ಮುನ್ನ ಹೊಸ ಸರ್ಕಾರವನ್ನು ರಚನೆ ಮಾಡಲಾಗುವುದು. ಈ ಸಂಬಂಧ ಮಿತ್ರಪಕ್ಷಗಳ ನಡುವೆ ಚರ್ಚೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ಆರ್‌ವಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಬಿಹಾರ ವಿಧಾನಸಭೆಯ ಅವಧಿಯೂ ನ.22ರಂದು ಕೊನೆಯಾಗಲಿದೆ.

- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದು 243 ಸದಸ್ಯ ಬಲದ ಸದನದಲ್ಲಿ ನಾಲ್ಕನೇ ಮೂರು ಭಾಗದಷ್ಟು ಬಹುಮತ ಹೊಂದಿದೆ. ಸರ್ಕಾರ ರಚನೆ ಬಗ್ಗೆ ಸದ್ಯ ಎನ್‌ಡಿಎ ಮಿತ್ರಕೂಟದಲ್ಲಿ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಮಾತನಾಡಿರುವ ಚಿರಾಗ್ ಪಾಸ್ವಾನ್, “ಸರ್ಕಾರ ರಚನೆಯ ಬಗ್ಗೆ ಸ್ಪಷ್ಟನೆ ನೀಡಲಾಗುತ್ತದೆ. ಇಂದು ರಾತ್ರಿಯ ವೇಳೆಗೆ, ನಾನು ಹಿರಿಯ ಕೇಂದ್ರ ಸಚಿವರೊಂದಿಗೆ ಮಾತನಾಡುವ ಸಾಧ್ಯತೆಯಿದೆ. ಇಂದು ಅಥವಾ ನಾಳೆಯೊಳಗೆ ಸರ್ಕಾರ ರಚನೆಯ ನೀಲನಕ್ಷೆ ಸಿದ್ಧವಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಆಪ್ಟೋಜೆನೆಟಿಕ್ಸ್ ಸಂಶೋಧನೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ: ನರಕೋಶಗಳಿಗೆ ಸಂಜೀವಿನಿಯಾಗಲಿರುವ...

ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಾರ್ಲ್ ಡಿಸೆರೋತ್, ಜರ್ಮನಿಯ ಬರ್ಲಿನ್ನಿನ ಹಮ್‌ಬೋಲ್ಟ್ ವಿಶ್ವವಿದ್ಯಾಲಯದ ಪೀಟರ್ ಹೆಗೆಮನ್ ಮತ್ತು ಜರ್ಮನಿಯ ವೂರ್ಜ್ಬರ್ಗ್ ವಿಶ್ವವಿದ್ಯಾಲಯದ ಜಾರ್ಜ್ ನಾಗೆಲ್ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 5ರಂದು ಭಾರತೀಯ ಕಾಲಮಾನ...

ಇದನ್ನು ಓದಿದ್ದೀರಾ? ಬಿಜೆಪಿ-ಆರ್‌ಎಸ್‌ಎಸ್‌ನ ‘ಲೆಕ್ಕಾಚಾರದ ರಾಜಕೀಯ ಯೋಜನೆ’ಯೇ ಎಸ್‌ಐಆರ್‌: ಸಿಪಿಎಂ ಆರೋಪ

ಇನ್ನು ಈ ಸಂದರ್ಭದಲ್ಲೇ ವಿಶ್ವಬ್ಯಾಂಕ್‌ ಇತರೆ ಯೋಜನೆಗಳಿಗೆ ನೀಡಿದ ಹಣವನ್ನು ಬಿಹಾರ ಚುನಾವಣೆಗೆ ಬಳಸಲಾಗಿದೆ ಎಂಬ ಜನ ಸುರಾಜ್ ಪಕ್ಷದ ಆರೋಪವನ್ನು ಪಾಸ್ವಾನ್ ತಳ್ಳಿಹಾಕಿದ್ದಾರೆ. ಜನ ಸುರಾಜ್ ನಾಯಕರು ಟೊಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿರುವ ಅವರು, ಈ ಆರೋಪಕ್ಕೆ ಪುರಾವೆ ಏನಿದೆ ಎಂದು ಪ್ರಶ್ನಿಸಿದ್ದಾರೆ.

“ಅವರಿಗೆ ಈ ಮಾಹಿತಿ ಲಭಿಸಿದ್ದು ಎಲ್ಲಿಂದ? ನಿಮ್ಮ ಬಳಿ ಯಾವುದೇ ದಾಖಲೆಗಳಿದ್ದರೆ ಅದನ್ನು ನೀಡಿ. ಅದಾದ ಬಳಿಕ ಸರ್ಕಾರ ಪ್ರತಿಕ್ರಿಯೆ ನೀಡುತ್ತದೆ” ಎಂದು ಪಾಸ್ವಾನ್ ತಿಳಿಸಿದ್ದಾರೆ.

“ರಾಜ್ಯದ ಮಹಿಳೆಯರಿಗೆ ನೀಡಲಾದ 10,000 ರೂ.ಗಳನ್ನು ವಿಶ್ವಬ್ಯಾಂಕ್‌ನಿಂದ ಬೇರೆ ಯಾವುದೋ ಯೋಜನೆಗಾಗಿ ಬಂದ 21,000 ಕೋಟಿ ರೂ.ಗಳಿಂದ ನೀಡಲಾಗಿದೆ ಎಂಬ ಮಾಹಿತಿ ನಮಗಿದೆ. ಆದರೆ ಮಾಹಿತಿ ತಪ್ಪಾಗಿರಬಹುದು. ಚುನಾವಣೆಯ ನೀತಿ ಸಂಹಿತೆಗೆ ಒಂದು ಗಂಟೆ ಮೊದಲು, 14,000 ಕೋಟಿ ರೂ.ಗಳನ್ನು ರಾಜ್ಯದ 1.25 ಕೋಟಿ ಮಹಿಳೆಯರಿಗೆ ವಿತರಿಸಲಾಗಿದೆ. ನಾನು ಹೇಳಿದಂತೆ, ಇದು ನಮಗೆ ಲಭಿಸಿದ ಮಾಹಿತಿ. ತಪ್ಪಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ಆದರೆ ಅದು ನಿಜವಾಗಿದ್ದರೆ, ಇದು ಎಷ್ಟರ ಮಟ್ಟಿಗೆ ಸರಿ ಎಂಬ ನೈತಿಕ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಕಾನೂನುಬದ್ಧವಾಗಿ ಏನೂ ನಡೆಯುವುದಿಲ್ಲ ಎಂದಾಗುತ್ತದೆ” ಎಂದು ಈ ಹಿಂದೆ ಜನ ಸುರಾಜ್ ನಾಯಕರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...

ದೆಹಲಿ ಪ್ರತಿಭಟನೆ ವೇಳೆ ಪತ್ರಕರ್ತೆಗೆ ಕಿರುಕುಳ ಆರೋಪ; ಎಸಿಪಿ ಭಗತ್ ಬಡ್ತಿಗೆ ಬ್ರೇಕ್‌

CEC ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರಿಗೆ ಲೈಂಗಿಕ...