ಸಾಮಾಜಿಕ‌ ಸಮಸ್ಯೆಗೆ ಪರಿಹಾರ ದೊರಕುವ ರೀತಿ ಪ್ರಣಾಳಿಕೆ ರೂಪಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Date:

Advertisements

ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದರು.

“ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು” ಎಂದು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು.

Advertisements

“ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ.98ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಉಳಿದ ಭರವಸೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದ್ದೇವೆ” ಎಂದರು.

ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಡಿ ಕೆ ಶಿವಕುಮಾರ್ ಮಾತು

“ನಮ್ಮದು ಪ್ರಗತಿಪರ ರಾಜ್ಯವಾದರೂ ನಮ್ಮ ಶೇ.61ರಷ್ಟು ಜನಸಂಖ್ಯೆ ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಇನ್ನು ನಮ್ಮ ರಾಜ್ಯದ ತೆರಿಗೆ ವಿಚಾರದಲ್ಲಿ ಶೇ.96ರಷ್ಟು ನಗರ ಪ್ರದೇಶಗಳಿಂದ ಬಂದರೆ, ಕೇವಲ ಶೇ.4ರಷ್ಟು ಮಾತ್ರ ಗ್ರಾಮೀಣ ಪ್ರದೇಶದಿಂದ ಬರುತ್ತಿವೆ. ನಮ್ಮ ರೈತರ ಕೃಷಿ, ತೋಟಗಾರಿಕೆ ಬೆಳೆಗಳಿಂದ ನಮಗೆ ಹೆಚ್ಚಿನ ಶಕ್ತಿ ಇದೆ. ಇವುಗಳ ಹೊರತಾಗಿ ನಾವು ಮುನ್ನಡೆಯಲು ಅಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಬಡವರಿಗೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಉತ್ತೇಜನ ನೀಡುವ ಯಾವುದೇ ಕಾರ್ಯಕ್ರಮಗಳಿದ್ದರೂ ಅವುಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ನಾವು ಕಳೆದ ಚುನಾವಣೆ ಸಮಯದಲ್ಲಿ ನ್ಯಾಯ್ ಯೋಜನೆ ಪರಿಚಯಿಸಿದ್ದರು. ನಾವು ಅದರ ಆಧಾರದ ಮೇಲೆ ಕೆಲವು ಕಾರ್ಯಕ್ರಮ ರೂಪಿಸಿದೆವು” ಎಂದು ಹೇಳಿದರು.

“ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು ಈಗ ಮೋದಿ ಗ್ಯಾರಂಟಿ ಎಂದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಆರ್ಥಿಕತೆ ಹಾಳಾಗಲಿದೆ ಎಂದು ಹೇಳುತ್ತಿದ್ದವರು ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಪ್ರಕಟಿಸಿದರು. ನಾವು ನಮ್ಮ ಜನರ ಬದುಕಿನಲ್ಲಿ ಬದಲಾವಣೆ ತರುವುದು ಮುಖ್ಯ” ಎಂದರು.

“ನಮ್ಮ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವಾಸ್ತವಾಂಶಕ್ಕೆ ಹತ್ತಿರವಾಗುವಂತೆ ಸಲಹೆ ನೀಡಬೇಕು. ಇಂದು ನಮಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿದ್ದೇವೆ. ನಾವು ಲೆಕ್ಕಾಚಾರ ಹಾಕಲು ಆರಂಭಿಸಿದ ನಂತರ ಬೇರೆ ರಾಜ್ಯಗಳು ತಮಗಾಗಿರುವ ಅನ್ಯಾಯ ಪ್ರಶ್ನಿಸುತ್ತಿದ್ದಾರೆ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಆಯೋಗದ ಕಡೆ ಬೆಟ್ಟು ಮಾಡಿ ತೋರುತ್ತಿದ್ದಾರೆ. ಹಣಕಾಸು ಆಯೋಗ ಬಜೆಟ್ ಮಂಡನೆ ಮಾಡುವುದಿಲ್ಲ ಅಲ್ಲವೇ? ಸರ್ಕಾರ ಬಜೆಟ್ ಮಂಡನೆ ಮಾಡುವಾಗ, ರಾಜ್ಯಕ್ಕೆ ಆಗುವ ಅನ್ಯಾಯ ಸರಿಪಡಿಸಬಹುದಲ್ಲವೇ” ಎಂದು ಪ್ರಶ್ನಿಸಿದರು.

“ನಮ್ಮ ರಾಜ್ಯದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ತೆಗೆದುಹಾಕಲು ಮುಂದಾಗಿದ್ದೇವೆ. ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಬಿಜೆಪಿ ಸ್ನೇಹಿತರ ಬಳಿಯೇ ನಾನು ಚರ್ಚೆ ಮಾಡಿದ್ದೇನೆ. ಈ ಎನ್ಇಪಿ ಜಾರಿ ಅಸಾಧ್ಯ ಎಂದು ಅವರೇ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ರಾಜ್ಯಗಳಲ್ಲಿ ಜಾರಿ ಮಾಡಲಾಗದನ್ನು ನಮ್ಮ ರಾಜ್ಯದಲ್ಲಿ ಆತುರದಲ್ಲಿ ಜಾರಿ ಮಾಡಲು ಮುಂದಾದರು. ಇದನ್ನು ಸರಿಪಡಿಸಲು ಸಮಿತಿ ರಚಿಸಲಾಗಿದೆ. ಇದೆಲ್ಲದರ ಜವಾಬ್ದಾರಿಯನ್ನು ಸಚಿವ ಸುಧಾಕರ್ ಅವರ ಹೆಗಲಿಗೆ ನೀಡಲಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆ ವಿಶ್ವದಾದ್ಯಂತ ಪ್ರಶಂಸೆ ಪಡೆದಿದೆ. ಈ ಕಾರಣಕ್ಕೆ ಪ್ರಪಂಚದ ಪ್ರಮುಖ 500 ಕಂಪನಿಗಳಲ್ಲಿ ಭಾರತೀಯರೇ ಹೆಚ್ಚು ನಿಯಂತ್ರಣ ಹೊಂದಿದ್ದಾರೆ” ಎಂದರು.

ಎಐಸಿಸಿ ಮುಖಂಡರೂ, ಪ್ರಣಾಳಿಕೆ ಸಮಿತಿ ಸದಸ್ಯರೂ ಆದ ರಾಜಾ, ನೀತಿ ಆಯೋಗದ ಉಪಾಧ್ಯಕ್ಷರಾದ ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾದ ಮೆಹರೂಜ್ ಖಾನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X