‘ಮಸೀದಿಗಳಿಗೆ ನುಗ್ಗಿ ಕೊಲ್ಲುತ್ತೇವೆ’; ಬಿಜೆಪಿ ಶಾಸಕ ಪ್ರಚೋದನಾಕಾರಿ ಹೇಳಿಕೆ

Date:

ಮಸೀದಿಗಳಿಗೆ ನುಗ್ಗಿ ಮುಸ್ಲಿಮರನ್ನು ಹಡುಕಿ ಕೊಲ್ಲುತ್ತೇವೆಂದು ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೀಶ್ ರಾಣೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅಹಮದ್‌ನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

ನಾಸಿಕ್ ಜಿಲ್ಲೆಯ ಶಾ ಪಾಂಚಲೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಣೆ, “ಮಹಂತ್ ರಾಮಗಿರಿ ಮಹಾರಾಜರ ವಿರುದ್ಧ ಮುಸ್ಲಿಮರು ಪ್ರತಿಭಟನೆ ನಡೆಸಿದರೆ, ಯಾವುದೇ ಹೇಳಿಕೆ ನೀಡಿದರೆ, ಮಸೀದಿಗೆ ನುಗ್ಗಿ ಮುಸ್ಲಿಮರನ್ನು ಕೊಲ್ಲುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ. ರಾಣೆ ಹೇಳಿಕೆಯನ್ನು ಕಾಂಗ್ರೆಸ್‌, ಆರ್‌ಜೆಡಿ, ಎಐಎಂಐಎಂ ಪಕ್ಷ ಸೇರಿದಂತೆ ಹಲವಾರು ವಿಪಕ್ಷಗಳು ಖಂಡಿಸಿದ್ದು, ಪ್ರಚೋದನಾಕಾರಿ ಹೇಳಿಕೆ ಎಂದು ಆರೋಪಿಸಿವೆ. ಬಿಜೆಪಿ ವಿರುದ್ಧ ಕಿಡಿಕಾರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಣೆ ಅವರ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿರುವ ಎಐಎಂಐಎಂ ಪಕ್ಷದ ವಕ್ತಾರ ಪಠಾಣ್, “ಚುನಾವಣೆಗೆ ಮುನ್ನ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಬಯಸಿದೆ. ನಿತೀಶ್ ರಾಣೆ ಅವರ ಭಾಷಣ ಉದ್ರೇಕಕಾರಿಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜರ ಎಂಬಾತ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ರಾಮಗಿರಿ ಮಹಾರಾಜರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...